ದೇವರಕಾನ ಶಾಲೆಯಲ್ಲಿ 79ನೆಯ ವರ್ಷದ ಅದ್ದೂರಿ ಸ್ವಾತಂತ್ರ್ಯೋತ್ಸವ

0

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ದೇವರ ಕಾನ ದಲ್ಲಿ 79ನೆಯ ವರ್ಷದ ಸ್ವಾತಂತ್ರ್ಯೋತ್ಸವ ಅತ್ಯಂತ ಅದ್ದೂರಿಯಿಂದ ನಡೆಯಿತು.

ಪದ್ಮನಾಭ ಗೌಡ ನೂಜಾಲು ಅವರು ದ್ವಜಾರೋಹಣವನ್ನು ನೆರವೇರಿಸಿದರು. ನಂತರ ಸಭಾ ಕಾರ್ಯಕ್ರಮ ನಡೆದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ದತ್ತಿ ನಿಧಿ ವಿತರಿಸಲಾಯಿತು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ನಡೆಯಿತು.

ಮುಖ್ಯ ಶಿಕ್ಷಕಿ ಶ್ರೀಮತಿ ಪ್ರಮೀಳಾ ರಾಜ್ ಅವರು ಅತಿಥಿಗಳನ್ನು ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಧ್ವಜಾರೋಹಣವನ್ನು ನೆರವೇರಿಸಿ ಕೊಟ್ಟಂತಹ ಪದ್ಮನಾಭ ಗೌಡರು ಸ್ವಾತಂತ್ರ ಹೋರಾಟಗಾರರನ್ನು ನೆನಪಿಸಿಕೊಳ್ಳುತ್ತಾ, ಸ್ವಾತಂತ್ರ್ಯದ ಮಹತ್ವ ಮತ್ತು ಸ್ವತಂತ್ರ ಭಾರತದಲ್ಲಿ ನಮ್ಮ ಕರ್ತವ್ಯಗಳು ಏನು ಎಂಬುದನ್ನು ನೆನಪಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿರುವ ಬಾಲಕೃಷ್ಣ ಕೀಲಾಡಿ, ಗ್ರಾಮ ಪಂಚಾಯತ್ ಸದಸ್ಯರಾಗಿರುವಂತಹ ಶಶಿಕಲಾ ಕುಳ್ಳಂಪಾಡಿ, ದತ್ತಿನಿಧಿ ಸ್ಥಾಪಕರಾಗಿರುವ ಶ್ರೀಮತಿ ಸರೋಜಿನಿ ಕುಳ್ಳಂಪಾಡಿ, ಎಸ್ ಡಿ ಎಂ ಸಿ ಅಧ್ಯಕ್ಷರಾಗಿರುವ ಗುರುಪ್ರಸಾದ್ ಎಡಮಲೆ, ಉಪಾಧ್ಯಕ್ಷೇ ಶ್ರೀಮತಿ ಸಂಧ್ಯಾ, ಅಂಗನವಾಡಿ ಶಿಕ್ಷಕಿ ಕುಮಾರಿ ನಂದಿನಿ ಎಸ್ ಡಿ ಎಂ ಸಿ ಸದಸ್ಯರು, ಪೋಷಕರು ಉಪಸ್ಥಿತರಿದ್ದರು. ಕುಮಾರಿ ದೀಪ್ತಿ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಶಿಕ್ಷಕಿ ಪ್ರಮೀಳಾ ರಾಜ್ ಅವರು ವಂದಿಸಿದರು.