ತುಳುನಾಡಿನ ಸಾಂಸ್ಕೃತಿಕ ಆಚರಣೆಯನ್ನು ನೆನಪಿಸುವ ಕಾರ್ಯ ಶ್ಲಾಘನೀಯ : ಕೃಷ್ಣಪ್ಪ ಬಂಬಿಲ















ತುಳುನಾಡಿನ ಪಾರಂಪರಿಕ ಆಚರಣೆಗಳನ್ನು ಇಂದಿನ ಯುವಜನತೆಗೆ ನೆನಪಿಸುವ ಕಾರ್ಯಕ್ರಮಗಳು ಶ್ಲಾಘನೀಯ ಎಂದು ರಂಗ ನಿರ್ದೇಶಕ ಕೃಷ್ಣಪ್ಪ ಬಂಬಿಲ ಹೇಳಿದರು. ಅವರು ರೋಟರಿ ಕ್ಲಬ್ ಬೆಳ್ಳಾರೆ ಟೌನ್, ಇಂಟರ್ಯಾಕ್ಟ್ ಕ್ಲಬ್ ಜ್ಞಾನದೀಪ ಬೆಳ್ಳಾರೆ ಮತ್ತು ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯ ಸಹಯೋಗದಲ್ಲಿ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ನಡೆದ ಆಟಿದ ನೆಂಪು ಕಾರ್ಯಕ್ರಮದಲ್ಲಿ ಆಟಿಯ ಮಹತ್ವದ ಬಗ್ಗೆ ಮಾತನಾಡಿದರು.

ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಅಧ್ಯಕ್ಷ ವಿಶ್ವನಾಥ ಪೂಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಜ್ಞಾನದೀಪ ಇಂಟರ್ಯಾಕ್ಟ್ ಕ್ಲಬ್ ಅಧ್ಯಕ್ಷ ಗಗನ್, ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಉಪಸ್ಥಿತ ರಿದ್ದರು. ವಿದ್ಯಾರ್ಥಿ ಶಿಕ್ಷಕಿ ರೇಷ್ಮಾ ಸ್ವಾಗತಿಸಿದರು. ತನುಶ್ರೀ ವಂದಿಸಿದರು. ಚಿತ್ರಾ ಪಿ ಕಾರ್ಯಕ್ರಮ ನಿರ್ವಹಿಸಿದರು. ರಚನಾ ಸಹಕರಿಸಿದರು. ಸಂಸ್ಥೆಯ ವಿದ್ಯಾರ್ಥಿಗಳು ತಯಾರಿಸಿದ ಆಟಿಯ ತಿಂಡಿ ತಿನಿಸುಗಳ ಪ್ರದರ್ಶನ ನಡೆಯಿತು. 32 ಬಗೆಯ ತಿಂಡಿ ತಿನಿಸುಗಳನ್ನು ಅತಿಥಿಗಳ ಜೊತೆ ಸಂಸ್ಥೆಯ ವಿದ್ಯಾರ್ಥಿಗಳು ಸವಿದರು.










