ಸುಳ್ಯ ಸೀಮೆಯ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ 79ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಯು.ಕೆ.ಕೇಶವ ರವರು ನೆರವೇರಿಸಿದರು.
















ಮುಖ್ಯ ಅತಿಥಿಗಳಾಗಿ ನಿವ್ರತ್ತ ಶಿಕ್ಷಕರಾದ ಯು.ಎಸ್.ಚಿದಾನಂದ ಗೂನಡ್ಕ ಮಾತನಾಡಿದರು.ಕಾರ್ಯಕ್ರಯದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಭವಾನಿ ಚಿಟ್ಟನ್ನೂರ್,ಗ್ರಾಮ ಪಂಚಾಯತ್ ಸದಸ್ಯ ರವೀಂದ್ರ ,ಅರಂತೋಡು ತೊಡಿಕಾನ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ತಾಲ್ಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಪುಷ್ಪ ಮೇದಪ್ಪ , ವ್ಯವಸ್ಥಾಪನ ಸಮಿತಿ ಸದಸ್ಯರಾದ ತಿಮ್ಮಯ್ಯ ಮೇತ್ತಡ್ಕ , ಮೆನೇಜರ್ ಆನಂದ, ಶ್ರೀ ಮಲ್ಲಿಕಾರ್ಜುನ ಭಜನಾ ಮಂಡಳಿ ಅಧ್ಯಕ್ಷ ಚಂದ್ರಶೇಖರ, ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯರು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರು, ಅರ್ಚಕ ವರ್ಗ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.










