















ಕರಿಕ್ಕಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆ. 15 ರಂದು ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಶಾಲೆಯ ಎಸ್. ಡಿ.ಎಂ. ಸಿ ಅಧ್ಯಕ್ಷ ಕುಸುಮಾದರ ಕೆರೆಯಡ್ಕ ಧ್ವಜಾರೋಹಣ ನೆರವೇರಿಸಿದರು. ವಿದ್ಯಾರ್ಥಿಗಳು ಮತ್ತು ಪೋಷಕರು ಮೆರವಣಿಗೆ ನಡೆಸಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ಕುಸುಮಾದರ ಕೆರೆಯಡ್ಕ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ ಮೇಲ್ಪಾಡಿ ಉಪಸ್ಥಿತರಿದ್ದರು.

ವೇದಿಕೆಯಲ್ಲಿ ಎಸ್ ಡಿ ಎಂ ಸಿ ಸದಸ್ಯ ದಿನೇಶ್ ಪುಂಡಿಮನೆ, ಮುಖ್ಯ ಗುರುಗಳಾದ ಚಂದನ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಗುರುಗಳು ಚಂದನ್ ಸ್ವಾಗತಿಸಿದರು. ಶ್ರೀಮತಿ ಜಯಶ್ರೀ ಮತ್ತು ಶ್ರೀಮತಿ ಲತಾ ನಿರೂಪಿಸಿದರು. ಅತಿಥಿ ಶಿಕ್ಷಕಿ ಗುಲಾಬಿ ವಂದಿಸಿದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.











