ಸುಳ್ಯ ಸ.ಪ.ಪೂರ್ವ ಕಾಲೇಜು ಅಮೃತಮಹೋತ್ಸವ : ಕಾರ್ಯಾಲಯ ಉದ್ಘಾಟನೆ

0

2025ರ ಡಿಸೆಂಬರ್ ತಿಂಗಳಲ್ಲಿ ‌ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಅಮೃತಮಹೋತ್ಸವ ಕಾರ್ಯಕ್ರಮ ನಡೆಯಲಿದ್ದು, ಇದರ ಕೆಲಸ‌ ಕಾರ್ಯ ನಿರ್ವಹಿಸುವ ನಿಟ್ಟಿನಲ್ಲಿ ನೂತನ ಕಾರ್ಯಾಲಯ ಮಾಡಲಾಗಿದ್ದು ಇದರ ಉದ್ಘಾಟನೆಯನ್ನು ಶಾಸಕಿ‌ ಭಾಗೀರಥಿ ಮುರುಳ್ಯ ಆ.15ರಂದು ಉದ್ಘಾಟಿಸಿದರು.

ನ.ಪಂ. ಅಧ್ಯಕ್ಷೆ ಶಶಿಕಲಾ ಎ ನೀರಬಿದಿರೆ, ತಹಶೀಲ್ದಾರ್ ಮಂಜುಳಾ, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ತಾಲೂಕು ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ಸೂಡಾ ಅಧ್ಯಕ್ಷ ಕೆ.ಎಂ. ಮುಸ್ತಫಾ, ಅಮೃತಮಹೋತ್ಸವ ಸಮಿತಿ ಅಧ್ಯಕ್ಷ ಸವಣೂರು ಸೀತಾರಾಮ ರೈ, ಪ್ರಧಾನ ಕಾರ್ಯದರ್ಶಿ ಎಂ.ಬಿ.ಸದಾಶಿವ, ಸಹ ಕಾರ್ಯದರ್ಶಿ ದಿನೇಶ್ ಮಡಪ್ಪಾಡಿ, ಎಸ್.ಡಿ.ಎಂ.ಸಿ. ಅಧ್ಯಕ್ಷೆ ಮಂಜುಳಾ ಬಡಿಗೇರ್, ಉಪಾಧ್ಯಕ್ಷ ಹಸೈನಾರ್ ಜಯನಗರ, ನ.ಪಂ. ಮಾಜಿ ಅಧ್ಯಕ್ಷ ರುಗಳಾದ ವಿನಯ ಕಂದಡ್ಕ, ಎಂ.ವೆಂಕಪ್ಪ ಗೌಡ, ಎಸ್.ಸಂಶುದ್ದೀನ್, ಕಾಲೇಜು ಪ್ರಾಂಶುಪಾಲ ಮೋಹನ್ ಗೌಡ ಬೊಮ್ಮೆಟ್ಟಿ, ಉಪಪ್ರಾಂಶುಪಾಲ ಪ್ರಕಾಶ ಮೂಡಿತ್ತಾಯ, ನ.ಪಂ. ಉಪಾಧ್ಯಕ್ಷ ಬುದ್ದ‌ನಾಯ್ಕ್ ಕಾಲೇಜು ಅಭಿವೃದ್ಧಿ ಸಮಿತಿಯ ಲಿಂಗಪ್ಪ ಗೌಡ ಕೇರ್ಪಳ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ ಮೊದಲಾದವರಿದ್ದರು.