ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯ ದಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಕಾಶಿಕಟ್ಟೆಯಿಂದ ಸಂಭ್ರಮದ ಮೆರವಣಿಗೆ

ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇಲ್ಲಿ
79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆ‌,15 ರಂದು ಸಂಭ್ರಮ ಸಡಗರದಿಂದ ಆಚರಿಸಲಾಯಿತು.

ಸುಬ್ರಹ್ಮಣ್ಯ ದ ಕಾಶಿಕಟ್ಟೆ ಮಹಾಗಣಪತಿ ದೇವಸ್ಥಾನದಿಂದ ವಿದ್ಯಾಲಯದ ವರೆಗೆ ಅದ್ದೂರಿಯ ಮೆರವಣಿಗೆಯಲ್ಲಿ ಬಂದು ಬಳಿಕ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.

ಧ್ವಜಾರೋಹಣವನ್ನು ವಾಯು ಸೇನೆಯ ನಿವೃತ್ತ ಯೋಧರಾದ ಶ ಜೆ ಪಿ ಎಂ ಚೆರಿಯನ್ ನೆರವೇರಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಸಭಾಧ್ಯಕ್ಷತೆಯನ್ನು ಮಾಸ್ಟರ್ ಅಭಿನಂದನಾ ಶರ್ಮ ವಹಿಸಿದ್ದರು. ಧ್ವಜಾರೋಹಣ ನೆರವೇರಿಸಿದ ಜೆ ಪಿ ಎಂ ಚೆರಿಯನ್ ವಿದ್ಯಾರ್ಥಿಗಳಿಗೆ ಸ್ವತಂತ್ರೋತ್ಸವದ ಮಹತ್ವದ ಬಗ್ಗೆ ತಿಳಿಸಿಕೊಟ್ಟರು, ಶಾಲಾ ಅಧ್ಯಕ್ಷರಾದ ಗಣೇಶ್ ಪ್ರಸಾದ್, ಸಂಚಾಲಕರಾದ ಚಂದ್ರಶೇಖರ ನಾಯರ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮತಿ ಭಾರತಿ ದಿನೇಶ್, ಪ್ರಾಂಶುಪಾಲರಾದ ಸಂಕೀರ್ತ ಹೆಬ್ಬಾರ್, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯಾರತ್ನ, ವಿದ್ಯಾರ್ಥಿ, ಶಾಲಾ ನಾಯಕ ಮಾಸ್ಟರ್ ಗೌರವ್, ಕಾಲೇಜಿನ ವಿದ್ಯಾರ್ಥಿ ನಾಯಕ ವಾಗೀಶ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸ್ವಾತಂತ್ರ್ಯ ದಿನದ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.