ಪರ್ವತಮುಖಿ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರ್ವತಮುಖಿ ಅಂಗನವಾಡಿ ಕೇಂದ್ರದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಬಾಲವಿಕಾಸ ಸಮಿತಿಯ ಅಧ್ಯಕ್ಷ ದೀಕ್ಷಿತ ಮತ್ತು ಲಯನ್ಸ್ ಕ್ಲಬ್ ಅಧ್ಯಕ್ಷರಾದ ವಿಮಲಾ ರಂಗಯ್ಯ ನೆರವೇರಿಸಿದರು. ಪೋಷಕರು, ಇನ್ನರ್ ವಿಲ್ ಹಾಗೂ ಲಯನ್ಸ್ ಕ್ಲಬ್ ಸದಸ್ಯರು, ಪುಟಾಣಿಗಳು ಭಾಗವಹಿಸಿದ್ದರು. ಅಂಗನವಾಡಿ ಕಾರ್ಯಕರ್ತೆ ಸುಗುಣ ವಿ ಸ್ವಾಗತಿಸಿ, ವಂದಿಸಿದರು.