
ಪಂಬೆತ್ತಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ನೆರವೇರಿಸಿದ ಶಾಲಾ ಎಸ್.ಡಿಎಂಸಿ ಅಧ್ಯಕ್ಷ ರಮೇಶ್ ಎಮ್ ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಗ್ರಾಮ ಪಂಚಾಯತ್ ಅಧ್ಯಕ್ಷ ಮಹೇಶ್ ಕುಮಾರ್ ಕರಿಕಳ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಉಪಸಿತರಿದ್ದ ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಪವಿತ್ರ ಕುದ್ವ ಮತ್ತು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗಣೇಶ ಭೀಮಗಳಿ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನಾಚರಣೆಯ ಮಹತ್ವದೊಂದಿಗೆ ಶುಭ ಹಾರೈದಿದರು.















ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿಗಳು, ಎಸ್.ಡಿಎಂಸಿ ಸದಸ್ಯರು, ನಿಕಟಪೂರ್ವ ಎಸ್.ಡಿ.ಎಂ.ಸಿ ಅಧ್ಯಕ್ಷರುಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಊರಿನ ವಿದ್ಯಾಭಿಮಾನಿಗಳು, ಪೋಷಕರು, ವಿದ್ಯಾರ್ಥಿಗಳು, ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹಾಗೂ ಅಂಗನವಾಡಿ ಪುಟಾಣಿಗಳು ಭಾಗವಹಿಸಿದ್ದರು.
ವಿವಿಧ ಸಂಘ ಸಂಸ್ಥೆಗಳು ಹಾಗೂ ಪೋಷಕರು ಸಿಹಿಯನ್ನ ವಿತರಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಭವ್ಯ ಬಿ ಸ್ವಾಗತಿಸಿ, ಅತಿಥಿ ಶಿಕ್ಷಕಿ ಶ್ರೀಮತಿ ಶಶಿಕಲಾ ವಂದಿಸಿದರು. ಗೌರವ ಶಿಕ್ಷಕ ಆಶ್ಲೇಷ ಕಲ್ಚಾರು ಬಹುಮಾನಿತರ ಪಟ್ಟಿಯನ್ನು ವಾಚಿಸಿದರು. ಅತಿಥಿ ಶಿಕ್ಷಕಿ ಮಮತಾ ಕಾರ್ಯಕ್ರಮವನ್ನು ನಿರೂಪಿಸಿದರು.










