ಮಾವಿನಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜ್ರಂಭಣೆಯಿಂದ ಆಚರಿಸಲಾಯಿತು.















ಧ್ವಜಾರೋಹಣವನ್ನು ಶಾಲಾ ಎಸ್ ಡಿಎಂಸಿ ಅಧ್ಯಕ್ಷ ವಸಂತ ಗೌಡ ಆಚಾರಿಕಾನ ನೆರವೇರಿಸಿದರು. ಮಾವಿನಕಟ್ಟೆ ಪೇಟೆಯಿಂದ ಶಾಲೆಯವರೆಗೆ ವಿದ್ಯಾರ್ಥಿಗಳಿಂದ ಮೆರವಣಿಗೆ ನಡೆಯಿತು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂಸಿ ಅಧ್ಯಕ್ಷ ವಸಂತ ಗೌಡ ವಹಿಸಿದ್ದರು. ಈ ಸಂಧರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ರಾಧಿಕಾ ಕೆ.ಎಸ್. ಶಿಕ್ಷಕ ದಯಾನಂದ, ಅತಿಥಿ ಶಿಕ್ಷಕಿ ಆಶಾ ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದ ಬಳಿಕ ಮಕ್ಕಳಿಂದ ದೇಶ ಭಕ್ತಿ ಗೀತೆ ಗಾಯನ, ಮಕ್ಕಳ ಭಾಷಣ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಧನುಶ್ರೀ ಸ್ವಾಗತಿಸಿ, ಶಿಕ್ಷಕ ದಯಾನಂದ ವಂದಿಸಿದರು.
ದೀವಿಕ್ ಆರ್ ಕಾರ್ಯಕ್ರಮ ನಿರೂಪಿಸಿದರು.










