ಎಣ್ಮೂರು ಸ.ಹಿ.ಪ್ರಾ ಶಾಲೆಯಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ

0

ಎಣ್ಮೂರು ಸ.ಹಿ.ಪ್ರಾ ಶಾಲೆಯಲ್ಲಿ 79 ನೇ ಸ್ವಾತಂತ್ರ್ಯ
ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಅಬ್ದುಲ್ ಷರೀಫ್ ಧ್ವಜಾರೋಹಣ ನೆರವೇರಿಸಿದರು. ವಿದ್ಯಾರ್ಥಿಗಳಿಂದ ಮೆರವಣಿಗೆ ನಡೆಯಿತು.

ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಎಡಮಂಗಲ ಗ್ರಾಮಪಂಚಾಯತ್ ಸದಸ್ಯರಾದ ಮಾಯಿಲಪ್ಪ ಗೌಡ ಪಟ್ಟೆ, ಶ್ರೀಮತಿ ರೇವತಿ ಎಣ್ಮೂರು, ಎಸ್.ಡಿ.ಎಂ.ಸಿ ಅಧ್ಯಕ್ಷ ಅಬ್ದುಲ್ ಶರೀಫ್, ಉಪಾಧ್ಯಕ್ಷೆ ಶ್ರೀಮತಿ ವನಿತಾ ರೈ ಎಣ್ಮೂರು, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಭವ್ಯ, ಸೀತಾರಾಮಾಂಜನೇಯ ಭಜನಾ ಮಂದಿರದ ಸ್ಥಾಪಕಾಧ್ಯಕ್ಷರಾದ ರಘುನಾಥ ರೈ ಅಲೆಂಗಾರ, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಭುವನೇಶ್ವರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು, ಹಿರಿಯ ವಿದ್ಯಾರ್ಥಿ ಸಂಘದ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಶಾಲಾ ವಿದ್ಯಾರ್ಥಿಗಳಿಂದ ಭಾಷಣ ದೇಶಭಕ್ತಿ ಗೀತೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಹಿರಿಯ ಶಿಕ್ಷಕಿ ಶಾಂತಮ್ಮನವರು ಸ್ವಾತಂತ್ರ್ಯ ದಿನಾಚರಣೆಯ ಮಹತ್ವದ ಬಗ್ಗೆ ತಿಳಿಸಿದರು.


ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಭುವನೇಶ್ವರಿ ಸ್ವಾಗತಿಸಿದರು.
ಅತಿಥಿ ಶಿಕ್ಷಕಿ ಶ್ರೀಮತಿ ರೇಷ್ಮಾ ಮತ್ತು ಸುದರ್ಶನರು ಕಾರ್ಯಕ್ರಮ ನಿರೂಪಿಸಿದರು.