ಸಾಂದೀಪ್ ವಿಶೇಷ ಮಕ್ಕಳ ಶಾಲೆಯಲ್ಲಿ ಸ್ವಾತಂತ್ರೋತ್ಸವ ಪ್ರಯುಕ್ತ ಸಾಂಸ್ಕೃತಿಕ ಸಂಭ್ರಮ ಹಾಗೂ ಪ್ರತಿಭಾ ಪುರಸ್ಕಾರ

0

ಸುಳ್ಯದ ಸಾಂದೀಪ್ ವಿಶೇಷಮಕ್ಕಳ ಶಾಲೆಯಲ್ಲಿ 79ನೇ ಸ್ವಾತಂತ್ರ್ಯೊತ್ಸವ ಕಾರ್ಯಕ್ರಮ ಹಾಗೂ ವಿಶೇಷ ಮಕ್ಕಳ ಸಾಂಸ್ಕೃತಿಕ ಸಂಭ್ರಮ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಎಂ ಬಿ ಫೌಂಡೆಶನ್ ಅ.15 ರಂದು ಸಾಂದೀಪ್ ವಿಶೇಷ ಮಕ್ಕಳ ಶಾಲೆ ಸಭಾಂಗಣದಲ್ಲಿ ನಡೆಯಿತು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ.ಬಿ.ಫೌಂಡೇಶನ್ ಅಧ್ಯಕ್ಷ ಎಂ ಬಿ ಸದಾಶಿವ ರವರು ವಹಿಸಿದರು. ಸುಳ್ಯ ವಲಯ ಅರಣ್ಯಾಧಿಕಾರಿ ಪ್ರಶಾಂತ್ ಪೈ ಯವರು ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಸಾಂದೀಪ್ ಶಾಲೆಯ ವಿಶೇಷ ಮಕ್ಕಳಿಗೆ ಏರ್ಪಡಿಸಿ ಸ್ಪರ್ಧೆ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ಸಾಂದೀಪ್ ವಿಶೇಷ ಮಕ್ಕಳ ಶಾಲೆಯ ಹಿತೈಸಿ ಸೂಂತೋಡು ದಂತ ಚಿಕಿತ್ಸಾಲಯದ ಡಾ.ಶ್ರಮಿಕ ವಿತರಿಸಿ ಮಾತನಾಡಿದರು.


ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷ ರೋ.ಡಾ.ರಾಮಮೋಹನ್ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಎಂ ಬಿ ಫೌಂಡೇಶನ್ ಕೋಶಾಧಿಕಾರಿ ಪುಷ್ಪರಾಧಕೃಷ್ಣ, ಸರಸ್ವತಿ ಕ್ರೆಡಿಟ್ ಕೋಅಪರೇಟಿವ್ ಸೊಸೈಟಿ ಉಪಾಧ್ಯಕ್ಷ ಕೇಶವ ಪ್ರಭು,ಹೇಮಂತ್ ಕಂದಡ್ಕ, ಉಪಸ್ಥಿತರಿದ್ದರು. ಎಂ ಬಿ ಫೌಂಡೇಶನ್ ಟ್ರಸ್ಟಿ ಕಾರ್ಯಕ್ರಮ ಸಂಯೋಜಕರಾದ ಶರೀಫ್ ಜಟ್ಟಿಪಳ್ಳ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.


ಸಾಂದೀಪ್ ವಿಶೇಷ ಮಕ್ಕಳ ಶಾಲೆ ಮುಖ್ಯೋಪಾಧ್ಯಾಯಿನಿ ಹರಿಣಿ ಸದಾಶಿವ ದನ್ಯವಾದ ಸಮರ್ಪಣೆ ಮಾಡಿದರು.
ಶಾಲಾ ಶಿಕ್ಷಕರು ಮತ್ತು ಪೋಷಕರು ಮೊದಲಾದವರು ಸಹಕರಿಸಿದರು.