ದೇವಚಳ್ಳ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

0

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವಚಳ್ಳದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಧ್ವಜಾರೋಹಣವನ್ನು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಜಯಾನಂದ ಪಟ್ಟೆ ನೆರವೇರಿಸಿದರು.

ಮುಖ್ಯ ಗುರುಗಳಾದ ಶ್ರೀಧರ ಗೌಡ ಕೆ ರವರು ಸ್ವಾಗತಿಸಿ ಶುಭಾಶಯ ಸಲ್ಲಿಸಿದರು. ನಂತರ ಶಾಲಾ ವಿದ್ಯಾರ್ಥಿಗಳು ರಾಷ್ಟ್ರ ನಾಯಕರ ಛದ್ಮವೇಷದೊಂದಿಗೆ, ಎಲ್ಲಾ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕವೃಂದದವರು ಮುಖ್ಯ ರಸ್ತೆಯಲ್ಲಿ ಘೋಷಣೆ ಹಾಗೂ ಬ್ಯಾಂಡ್ ನೊಂದಿಗೆ ಮೆರವಣಿಗೆಯ ಸಾಗಿದರು. ನಂತರ ಶಾಲಾ ವಿದ್ಯಾರ್ಥಿಗಳಿಂದ ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು. ನಂತರ ಎಲ್ಲಾ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ಹಂಚಲಾಯಿತು. ಶಾಲಾ ಸಹ ಶಿಕ್ಷಕಿಯಾದ ಹರಿಣಾಕ್ಷಿ ಹೆಚ್ ಎಸ್ ಕಾರ್ಯಕ್ರಮವನ್ನು ನಿರೂಪಿಸಿದರು. ಅತಿಥಿ ಶಿಕ್ಷಕರಾದ ಜೀವನ್ ಕುಮಾರ್ ಟಿ ವಂದಿಸಿದರು