ಆಲೆಟ್ಟಿಯ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ

0

ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಆಲೆಟ್ಟಿಯಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ ನಡೆಯಿತು.

ಆಲೆಟ್ಟಿ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಶ್ರೀಮತಿ ವೀಣಾ ವಸಂತ ರವರು ದ್ವಜಾರೋಹಣ ನೆರವೇರಿಸಿದರು.

ಸ್ವಾತಂತ್ರ್ಯ ದಿನಾಚರಣೆ ಯ ಅಂಗವಾಗಿ ನಡೆಸಿದ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪಂಚಾಯತ್ ನ ಉಪಾಧ್ಯಕ್ಷರಾದ ಶ್ರೀಮತಿ ಕಮಲ ನಾಗಪಟ್ಟಣ ಮತ್ತು ಸದಸ್ಯರಾದ ಶಿವಾನಂದ ರಂಗತಮಲೆ ಯವರು ಬಹುಮಾನ ವಿತರಿಸಿದರು.

ಮುಖ್ಯ ಗುರುಗಳು ಎಲ್ಲರಿಗೂ ಶುಭ ಹಾರೈಸಿ, ವಂದಿಸಿದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು. ಈ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯ ಗುರುಗಳಾದ ಶ್ರೀಮತಿ ಕಾವ್ಯ. ಎಂ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಸಿಬ್ಬಂದಿಗಳು ,ಅಂಗನವಾಡಿ ಕಾರ್ಯಕರ್ತೆ ,ಸಹಾಯಕಿ ಪುಟಾಣಿಗಳು ಹಾಗೂ ಶಾಲೆಯ ಶಿಕ್ಷಕರು , ವಿದ್ಯಾರ್ಥಿಗಳು, ಪೋಷಕರು ಮತ್ತು ಅಡುಗೆ ಸಿಬ್ಬಂದಿಯವರು ಉಪಸ್ಥಿತರಿದ್ದರು.