ಯೇನೆಕಲ್ಲು ಸ.ಹಿ.ಪ್ರಾ. ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

0

ಯೇನೆಕಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಮುಖ್ಯ ಗುರುಗಳು ಸ್ವಾಗತಿಸಿದರು.
ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಕುಮಾರ್ ಪೈಲಾಜೆ ಧ್ವಜಾರೋಹಣವನ್ನು ನೆರವೇರಿಸಿದರು.

ಬಳಿಕ ವಿದ್ಯಾರ್ಥಿಗಳು ಪೋಷಕರು ಶಿಕ್ಷಕರು ಎಸ್.ಡಿ.ಎಂ.ಸಿ.ಯ ಸದಸ್ಯರು ಸೇರಿಕೊಂಡು ತ್ರಿವರ್ಣ ಧ್ವಜದೊಂದಿಗೆ ಮೆರವಣಿಗೆಯನ್ನು ಮಾಡಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ಕುಮಾರ್ ವಹಿಸಿದ್ದರು.

ಸಭೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿಗಳಾದ ಶಿವಪ್ರಸಾದ್ ಮಾದನಮನೆ, ಎಸ್.ಡಿ.ಎಂ.ಸಿ. ಉಪಾಧ್ಯಕೆ ನಳಿನಿ ಪರಮಲೆ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಯಮುನಾ, ಶಾಲಾ ಮುಖ್ಯ ಗುರುಗಳಾದ ಶ್ರೀಮತಿ ಚಂದ್ರಿಕಾ ಬಿಸಿ ಉಪಸ್ಥಿತರಿದ್ದರು.

ಬಳಿಕ ವಿದ್ಯಾರ್ಥಿಗಳಿಂದ ವಿವಿಧ ರೀತಿಯ ಮನರಂಜನ ಕಾರ್ಯಕ್ರಮಗಳು ಜರುಗಿದವು. ಕಾರ್ಯಕ್ರಮದಲ್ಲಿ ಊರ ಪರ ಊರ ಗಣ್ಯರು, ಪೋಷಕರು, ನಿವೃತ್ತ ಶಿಕ್ಷಕರು, ಎಸ್.ಡಿ.ಎಂ.ಸಿ ಸದಸ್ಯರು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಅಕ್ಷರ ದಾಸೋಹ ಸಿಬ್ಬಂದಿಗಳು ಪಾಲ್ಗೊಂಡರು. ಸಹ ಶಿಕ್ಷಕಿ ಶ್ರೀಮತಿ ಅಂಬಿಕಾ ಎನ್ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕಿಯಾದ ಶ್ರೀಮತಿ ಕಮಲ ಸಿ ವಂದಿಸಿದರು. ಶಾಲಾ ನಾಯಕಿ ದಿಯಾ ಎ.ಬಿ ಹಾಗೂ ದೀಪ್ತಿ ಪಿ.ಆರ್ ಕಾರ್ಯಕ್ರಮ ನಿರೂಪಿಸಿದರು.