ಕೊಯಿಕುಳಿ; ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ; ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನೆ

0

ದುಗ್ಗಲಡ್ಕ ಕೊಯಿಕುಳಿಯ ಶ್ರೀ ಕೃಷ್ಣ ಮಂದಿರ, ಮಿತ್ರ ಯುವಕ ಮಂಡಲ ಕೊಯಿಕುಳಿ, ಕುರಲ್ ತುಳುಕೂಟ ದುಗ್ಗಲಡ್ಕ ಇದರ ಆಶ್ರಯದಲ್ಲಿ ನಡೆಯಲಿರುವ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಆ.15ರಂದು ನಡೆಯಿತು.


ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯ ಶಿಕ್ಷಕ ಚಂದ್ರಶೇಖರ ಗೌಡ ಮೋಂಟಡ್ಕ ನೆರವೇರಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ನಗರ ಪಂಚಾಯತ್ ಸದಸ್ಯ ಬಾಲಕೃಷ್ಣ ರೈ ದುಗ್ಗಲಡ್ಕ, ನಾಮ ನಿರ್ದೇಶನ ಸದಸ್ಯ ಭಾಸ್ಕರ ಪೂಜಾರಿ ಬಾಜಿನಡ್ಕ, ಇನ್ನರ್ ವೀಲ್ ಕ್ಲಬ್ ಪೂರ್ವಾಧ್ಯಕ್ಷೆ ಶ್ರೀಮತಿ ಚಿಂತನಾ ಸುಬ್ರಹ್ಮಣ್ಯ ಉಪಸ್ಥಿತರಿದ್ದರು. ಸಭೆಯ ಅಧ್ಯಕ್ಷತೆಯನ್ನು ಯುವಕ ಮಂಡಲದ ಅಧ್ಯಕ್ಷ ತೀರ್ಥರಾಮ ಕೊಯಿಕುಳಿ ವಹಿಸಿದ್ದರು. ವೇದಿಕೆಯಲ್ಲಿ ಕುರಲ್ ತುಳುಕೂಟದ ಸಂಚಾಲಕ ಕೆ.ಟಿ.ವಿಶ್ವನಾಥ, ಅಧ್ಯಕ್ಷ ರಮೇಶ್ ನೀರಬಿದಿರೆ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಕುರಲ್ ತುಳುಕೂಟದ ಕಾರ್ಯದರ್ಶಿ ಭಾಗೀಶ್ ಕೆ.ಟಿ. ಸ್ವಾಗತಿಸಿ, ಕೃಷ್ಣ ಮಂದಿರದ ಕಾರ್ಯದರ್ಶಿ ಭವಾನಿಶಂಕರ ಕಲ್ಮಡ್ಕ ವಾದಿಸಿದರು. ಯುವಕ ಮಂಡಲದ ಪೂರ್ವಾಧ್ಯಕ್ಷ ಮನೋಜ್ ಪಾನತ್ತಿಲ ಕಾರ್ಯಕ್ರಮ ನಿರೂಪಿಸಿದರು.
ಶ್ರೀ ಕೃಷ್ಣ ಮಂದಿರದಲ್ಲಿ ಬೆಳಿಗ್ಗೆ ಗಣಪತಿ ಹವನ, ಭಜನಾ ಕಾರ್ಯಕ್ರಮ ನಡೆಯಿತು.