














ಅಮರ ಪಡ್ನೂರು ಚೊಕ್ಕಾಡಿ ಸತ್ಯಸಾಯಿ ವಿದ್ಯಾಮಂದಿರದಲ್ಲಿ
79ನೇ ಸ್ವಾತಂತ್ರ್ಯೋತ್ಸವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಸಂಸ್ಥೆಯ ಅಧ್ಯಕ್ಷ ಮಹಾಬಲೇಶ್ವರ ಕಾಂಚೋಡುರವರ ಧ್ವಜಾರೋಹಣಗೈದು ಶುಭ ಹಾರೈಸಿದರು. ಭಾರತೀಯ ನೌಕಾಪಡೆಯ ಕ್ಯಾಪ್ಟನ್ ವಿಜಯ್ ಸಿಂಗ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು, ಮುಖ್ಯೋಪಾಧ್ಯಾಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕ ವೃಂದ, ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು.










