ಸರಕಾರಿ ಪ್ರೌಢಶಾಲೆ ದುಗ್ಗಲಡ್ಕ ಇಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ ಯನ್ನು ಸಂಭ್ರಮದಿಂದ ಆಚರಿಸಲಾಯಿತು. ಎಸ್ ಡಿ ಎಂ ಸಿ ಅಧ್ಯಕ್ಷೆ ಶೀಲಾವತಿ ಪಿ. ಯವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು , ಪೋಷಕರು ಮತ್ತು ಸಿಬ್ಬಂದಿ ಎಸ್ ಡಿ ಎಂ ಸಿ ಸದಸ್ಯರು, ನಮ್ಮ ಕ್ಲಿನಿಕ್ ಸಿಬ್ಬಂದಿ,ಅಂಗನವಾಡಿ ಸಿಬ್ಬಂದಿ ಮತ್ತು ಪುಟಾಣಿಗಳು ಹಾಜರಿದ್ದರು.
















ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಾಂಸ್ಕೃತಿಕ ಚಟುವಟಿಕೆ ನಡೆಸಿ ಕೊಟ್ಟರು. ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು. ಎಸ್ ಡಿ ಎಂ ಸಿ ಮತ್ತು ಪೋಷಕರ ವತಿಯಿಂದ ಸಿಹಿ ತಿಂಡಿ ವಿತರಿಸಲಾಯಿತು.










