ಮರಾಟಿ ಸಮಾಜ ಸೇವಾ ಸಂಘ ಸುಳ್ಯ ಇದರ ವತಿಯಿಂದ 79 ಸ್ವಾತಂತ್ರ್ಯೊತ್ಸವದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ಆ.15 ರಂದು ಗಿರಿದರ್ಶಿನಿ ಸಭಾಭವನದ ವಠಾರದಲ್ಲಿ ನಡೆಯಿತು.
















ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷ ಬಾಲಕೃಷ್ಣ ನಾಯ್ಕ್ ಅಜ್ಜಾವರ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷರುಗಳಾದ ಡಾ.ಎಸ್.ರಂಗಯ್ಯ, ಸೀತಾನಂದ ಬೇರ್ಪಡ್ಕ, ಶ್ರೀಮತಿ ಗಿರಿಜಾ ಎಂವಿ.,ಗೌರವಾಧ್ಯಕ್ಷ ಜನಾರ್ದನ ಬಿ.ಕುರುಂಜಿಭಾಗ್, ಉಪಾಧ್ಯಕ್ಷೆ ಶ್ರೀಮತಿ ಸುಲೋಚನಾ ನಾರಾಯಣ, ಕಾರ್ಯಕಾರಿ ಸಮಿತಿ ಸದಸ್ಯರಾದ ಜನಾರ್ದನ ನಾಯ್ಕ್ ಕೇರ್ಪಳ, ಜಗದೀಶ್ ಅರಂಬೂರು, ಮಹಿಳಾ ವೇದಿಕೆಯ ಅಧ್ಯಕ್ಷೆ ಶ್ರೀಮತಿ ರೇವತಿ ದೊಡ್ಡೇರಿ, ಯುವ ವೇದಿಕೆಯ ಅಧ್ಯಕ್ಷ ಉದಯಕುಮಾರ್ ಮಾಣಿಬೆಟ್ಟು ಹಾಗೂ ಸಮಿತಿಗಳ ಸದಸ್ಯರು ಉಪಸ್ಥಿತರಿದ್ದರು.










