ಸುಳ್ಯ ನ್ಯಾಯಾಲಯದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

0

ಸುಳ್ಯ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ಆ.15 ರಂದು ಸ್ವಾತಂತ್ರ್ಯ ದಿನಾಚರಣೆ ಯನ್ನು ಆಚರಿಸಲಾಯಿತು.

ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಿ ಮೋಹನ್ ಬಾಬು ರವರು ಧ್ವಜಾರೋಹಣ ವನ್ನು ನೆರವೇರಿಸಿದರು.


ಕಾರ್ಯಕ್ರಮದಲ್ಲಿ ಸಿವಿಲ್ ನ್ಯಾಯಾಧೀಶೆ ಅರ್ಪಿತಾ ರವರು ಉಪಸ್ಥಿತರಿದ್ದರು. ಕಾರ್ಯಕ್ರಮದ

ಅಧ್ಯಕ್ಷತೆಯನ್ನು ವಹಿಸಿದ್ದ ಸುಳ್ಯ ವಕೀಲರ ಸಂಘದ ಅಧ್ಯಕ್ಷ ಸುಕುಮಾರ್ ಕೋಡ್ತುಗುಳಿ ಅವರು ಶುಭ ಹಾರೈಸಿದರು.
ಕಾರ್ಯದರ್ಶಿ ಜಗದೀಶ ಡಿ.ಪಿ ಸ್ವಾಗತಿಸಿ ಕುಸುಮಾಧರ ಕುತ್ತಿಮುಂಡ ವಕೀಲರು ವಂದಿಸಿದರು. ಕಾರ್ಯಕ್ರಮದಲ್ಲಿ ವಕೀಲರು, ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ನ್ಯಾಯಾಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು.