














ನಾಡಹಬ್ಬಗಳ ಆಚರಣಾ ಸಮಿತಿ ಹಾಗೂ ಯಾದವ ಸಭಾ ಸುಳ್ಯ ತಾಲೂಕು ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿಯನ್ನು ಆ. ೧೬ರಂದು ಸುಳ್ಯ ತಾಲೂಕು ಕಚೇರಿಯಲ್ಲಿ ಆಚರಿಸಲಾಯಿತು. ಶಾಸಕರ ಅನುಪಸ್ಥಿತಿಯಲ್ಲಿ ಸುಳ್ಯ ನಗರಸಭಾ ಅಧ್ಯಕ್ಷರಾದ ಶ್ರೀಮತಿ ಶಶಿಕಲಾ ನೀರಬಿದಿರೆ ಅಧ್ಯಕ್ಷತೆ ವಹಿಸಿದ್ದರು. ಯಾದವ ಸಭಾ ಸುಳ್ಯ ತಾಲೂಕು ಸಮಿತಿ ಅಧ್ಯಕ್ಷ ಕರುಣಾಕರ ಹಾಸ್ಪಾರೆ ಮುಖ್ಯ ಅತಿಥಿಯಾಗಿದ್ದರು.

ನಾಡಹಬ್ಬಗಳ ಆಚರಣಾ ಸಮಿತಿ ಸದಸ್ಯರು, ನಗರ ಪಂಚಾಯತ್ ಸದಸ್ಯರು, ತಾಲೂಕು ಮಟ್ಟದ ಅಧಿಕಾರಿಗಳು, ಸುಳ್ಯ ತಾಲೂಕು ಕಚೇರಿ ಸಿಬ್ಬಂದಿಗಳು ಹಾಗೂ ಯಾದವ ಸಮುದಾಯದ ಪ್ರಮುಖರು ಉಪಸ್ಥಿತರಿದ್ದರು.











