ಪೆರುವಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುರ್ಕೆತ್ತಿ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ವನ್ನು ನಿವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಕಿಶೋರ್ ಕುಮಾರ್ ಶೆಟ್ಟಿ ನೇರವೇರಿಸಿದರು.















ಸಭಾಧ್ಯಕ್ಷ ತೆಯನ್ನು ಬಾಲವಿಕಾಸ ಅಧ್ಯಕ್ಷೆ ಶ್ರೀಮತಿ ಸಮೀರ ವಹಿಸಿದ್ದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶ್ರೀಮತಿ ಶಹಿನಾಜ್, ಪಂಚಾಯಿತಿ ಸದಸ್ಯ ಸಚಿನ್ ರಾಜ್ ಶೆಟ್ಟಿ, ಪಾಲ್ತಾಡು ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷ ವೆಂಕಪ್ಪ ಗೌಡ ನಾರ್ಕೋಡು ಉಪಸ್ಥಿತರಿದ್ದರು. ಅಂಗನವಾಡಿ ಪುಟಾಣಿಗಳು, ಪೋಷಕರು, ಸ್ವಸಹಾಯ ಸಂಘದ ಸದಸ್ಯರು, ಗ್ರಾಮಸ್ಥರು ಭಾಗವಹಿಸಿದ್ದರು.ಅಂಗನವಾಡಿ ಶಿಕ್ಷಕಿ ಶ್ರೀಮತಿ ಚಂದ್ರಾವತಿ ಕಾರ್ಯಕ್ರಮ ನಿರೂಪಿಸಿ, ಶ್ರೀಮತಿ ದೇವಕಿ ಸ್ವಾಗತಿಸಿದರು










