ಪಂಜದಲ್ಲಿ ಮಹಿಳಾ ಉಚಿತ ಆರೋಗ್ಯ ಮಾಹಿತಿ ಮತ್ತು ತಪಾಸಣಾ ಶಿಬಿರ

0


ಜೇಸಿ ಐ ಪಂಜ ಪಂಚಶ್ರೀ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಆಯುಷ್ಮಾನ್ ಆರೋಗ್ಯ ಮಂದಿರ, ಪ್ರಾಥಮಿಕ ಆರೋಗ್ಯ ಕೇಂದ್ರ ಪಂಜ.ಸುಳ್ಯ ತಾಲೂಕು,ದ.ಕ. ಇವರ ಸಹಭಾಗಿತ್ವದೊಂದಿಗೆ ನಾಡೋಳಿ ಡಯಾಗ್ನೋಸ್ಟಿಕ್ ಸೆಂಟರ್, ಪಂಜ ಇದರ ಪ್ರಥಮ ವರ್ಷದ ಕಾರ್ಯಾಚರಣೆ ಪ್ರಯುಕ್ತ ಮಹಿಳಾ ಉಚಿತ ಆರೋಗ್ಯ ಮಾಹಿತಿ ಶಿಬಿರ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮವು ಆ.16 ರಂದು ಆಯುಷ್ಮಾನ್ ಆರೋಗ್ಯ ಕೇಂದ್ರ, ಪಂಜದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೇಸಿಐ ಪಂಜ ಪಂಚಶ್ರೀ ಅಧ್ಯಕ್ಷ ಜೇಸಿ JFM ವಾಚಣ್ಣ ಕೆರೆಮೂಲೆ ವಹಿಸಿದ್ದರು.ಉದ್ಘಾಟನೆಯನ್ನು ಜನರಲ್ ಫಿಸಿಷಿಯನ್ ನಾಡೋಳಿ ಡಯಾಗ್ನೋಸ್ಟಿಕ್ ಸೆಂಟರ್ ನ ಡಾ: ಸುಚಿತ್ರಾ ರಾವ್ ನೆರವೇರಿಸಿದರು.ಸಂಪನ್ಮೂಲ ವ್ಯಕ್ತಿಗಳಾಗಿ. ಕೆ.ಎಸ್.ಹೆಗ್ಡೆ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ಮಂಗಳೂರು ಇಲ್ಲಿನ ಶೆಂಡ್ಯೇ ಸ್ತ್ರೀ ರೋಗ ಹಾಗೂ ಪ್ರಸೂತಿ ತಜ್ಞರು ಡಾ: ಹರ್ಷಿತಾ ರವರು ಮಹಿಳಾ ಆರೋಗ್ಯ ಮಾಹಿತಿ , ತಾಯಿ ಮತ್ತು ಮಗು ಸ್ತನ್ಯಪಾನದ ಮಹತ್ವ ಹಾಗೂ ಗರ್ಭಕೋಶ ಕ್ಯಾನ್ಸರ್ ಬಗ್ಗೆ ಮಾಹಿತಿ ನೀಡಿದರು.ವೇದಿಕೆಯಲ್ಲಿ ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ಸುರಕ್ಷಾ ಅಧಿಕಾರಿ ಶ್ರೀಮತಿ ಟಿ.ವಿ.ರಾಹೇಲಮ್ಮ , ವಲಯ ನೀರ್ದೆಶಕರು ಕಾರ್ಯಕ್ರಮ ವಿಭಾಗ ವಲಯ 15 ಹಾಗೂ ನಾಡೋಳಿ ಡಯಾಗ್ನೋಸ್ಟಿಕ್ ಸೆಂಟರ್ ಕಡುಬ ಮತ್ತುಪಂಜ ಇದರ. ಮಾಲ್ಹಕರ JFD ಕಾಶಿನಾಥ್ ಗೋಗಟೆ. ಜೇಸಿಐ ಪಂಜ ಪಂಚಶ್ರೀ ಕಾರ್ಯದರ್ಶಿ JFM ಅಶ್ವಥ್ ಬಾಬ್ಲುಬೆಟ್ಟು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪೂರ್ವಾಧ್ಯಕ್ಷ JFM ವಾಸುದೇವ ಮೇಲ್ಪಾಡಿ ವೇದಿಕೆಗೆ ಆಹ್ವಾನಿಸಿದರು ಜೇಸಿವಾಣಿಯನ್ನು JFM ಅಶ್ವಥ್ ಬಾಬ್ಲುಬೆಟ್ಟು ವಾಚಿಸಿದರು.JFD ಕಾಶಿನಾಥ್ ಗೋಗಟೆ ಪ್ರಸ್ತಾವನೆ ಮಾತುಗಳಾಡಿ ಸ್ವಾಗತಿಸಿದರು. ಕಾರ್ಯದರ್ಶಿ JFM ಅಶ್ವತ್ ಬಾಬ್ಲುಬೆಟ್ಟು ವಂದಿಸಿದರು.ನಂತರ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಹಾಗೂ ನಾಡೋಳಿ ಡಯಾಗ್ನೋಸ್ಟಿಕ್ ಸೆಂಟರ್ ನ ಸಿಬ್ಬಂದಿಗಳು ಮತ್ತು ಆರೋಗ್ಯ ತಪಾಸಣಾ ಶಿಬಿರಾರ್ಥಿಗಳು ಭಾಗವಹಿಸಿದ್ದರು.