ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಪಂಜ ಇದರ ವಾರ್ಷಿಕ ಮಹಾಸಭೆ ಮತ್ತು ಸ್ಕೌಟ್ ಗೈಡ್ ಶಿಕ್ಷಕರ ಮಾಹಿತಿ ಕಾರ್ಯಗಾರವು ಪಂಜ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಮಾಧವ ಬಿ.ಕೆಯವರ ಅಧ್ಯಕ್ಷತೆಯಲ್ಲಿ ಆ. 16 ರಂದು ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲಾ ಸಭಾಂಗಣದಲ್ಲಿ ಜರುಗಿತು.
ವಿದ್ಯಾಬೋಧಿನೀ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ಪಿಜಿಎಸ್ ಎನ್ ಪ್ರಸಾದ್ ದೀಪ ಬೆಳಗಿಸಿ ಉದ್ಘಾಟಿಸಿ, ಬಾಳಿಲ ವಿದ್ಯಾಸಂಸ್ಥೆಯಲ್ಲಿ ಸ್ಥಳೀಯ ಸಂಸ್ಥೆಯ ಕಛೇರಿಗಾಗಿ ಒಂದು ಕೊಠಡಿಯನ್ನು ನೀಡುವ ಬಗ್ಗೆ ಪ್ರಸ್ತಾಪಿಸಿ, ಸ್ಥಳೀಯ ಸಂಸ್ಥೆಯ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿ ಶುಭ ಹಾರೈಸಿದರು.
ಜಿಲ್ಲಾ ಗೈಡ್ ಆಯುಕ್ತೆ ವಿಮಲ ರಂಗಯ್ಯ ಸ್ಕೌಟ್ ಗೈಡ್ ಚಟುವಟಿಕೆಗಳನ್ನು ಇನ್ನಷ್ಟು ವರ್ಧಿಸಲು ಮಾರ್ಗದರ್ಶನ ನೀಡಿದರು.















ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರತಿಮ್ ಕುಮಾರ್ ಭಾಗವಹಿಸಿ, ಜಿಲ್ಲೆಯ ತರಬೇತಿ ಮತ್ತು ಸಂಘಟನೆಯ ಬಗ್ಗೆ ಮಾಹಿತಿ ನೀಡಿದರು.
ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಭರತ್ ರಾಜ್ ಕೆ ಸ್ಥಳೀಯ ಸಂಸ್ಥೆಯ ನೋಂದಣಿ ಪ್ರಕ್ರಿಯೆ, OMYS ನೋಂದಣಿ, ದಳಗಳ ಚಾರ್ಟರ್ ನಂಬರ್, ಶಿಕ್ಷಕರ ವಾರೆಂಟ್ ಇತ್ಯಾದಿಗಳ ಮಾಹಿತಿ ನೀಡಿದರು.
ಕಳೆದ ಶೈಕ್ಷಣಿಕ ಸಾಲಿನಲ್ಲಿ ನಡೆದ ದ್ವಿತೀಯ ಸೋಪಾನ ಪರೀಕ್ಷೆಯ ಉತ್ತೀರ್ಣರಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು. ಈ ಪಟ್ಟಿಯನ್ನು ಸ್ಕೌಟರ್ ಅರವಿಂದ ಕೆ.ಜಿ ವಾಚಸಿದರು.

2025 -26 ನೇ ಸಾಲಿನ ಕರ್ನಾಟಕ ರಾಜ್ಯ ಸ್ಕೌಟ್ ಗೈಡ್ ಯೋಜಿತ ಕಾರ್ಯಕ್ರಮಗಳ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.
2024-25 ಲೆಕ್ಕಪತ್ರವನ್ನು ಸ್ಥಳೀಯ ಸಂಸ್ಥೆಯ ಕೋಶಾಧಿಕಾರಿ ವಾಸುದೇವ ನಡ್ಕ ಮಂಡಿಸಿ, ಅನುಮೋದನೆ ಪಡೆದುಕೊಂಡು, 2025 -26ರ ಆಯವ್ಯಯ ಮುಂಗಡಪತ್ರವನ್ನು ಸಭೆ ಮುಂದಿಟ್ಟರು.
2024 -25ರ ವಾರ್ಷಿಕ ವರದಿಯನ್ನು ಮತ್ತು 2025-26ರ ವಾರ್ಷಿಕ ಯೋಜಿತ ಕಾರ್ಯಕ್ರಮಗಳ ಪಟ್ಟಿಯನ್ನು ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಉದಯಕುಮಾರ್ ರೈ ಎಸ್ ಬಾಳಿಲ ಸಭೆಗೆ ತಿಳಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.
ಉಪಾಧ್ಯಕ್ಷರಾದ ಸೋಮಶೇಖರ ನೇರಳ ಸ್ವಾಗತಿಸಿ, ಜೊತೆ ಕಾರ್ಯದರ್ಶಿ ಸರೋಜಿನಿ ಕೆ ವಂದಿಸಿದರು.
ಪಂಜ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯ ಪ್ರಾಥಮಿಕ, ಪ್ರೌಢಶಾಲೆಗಳ ಸ್ಕೌಟ್ ಗೈಡ್ ಶಿಕ್ಷಕರು ಹಾಗೂ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳ ರೋವರ್ ರೇಂಜರ್ ಉಪನ್ಯಾಸಕರು, ಸ್ಥಳೀಯ ಸಂಸ್ಥೆಯ ಪದಾಧಿಕಾರಿಗಳು ಭಾಗವಹಿಸಿದ್ದರು.










