ಯುವಕ ಮಂಡಲ ಉಬರಡ್ಕ ಮಿತ್ತೂರು ಇವರ ಆಶ್ರಯದಲ್ಲಿ ಯುವತಿ ಮಂಡಲ ಉಬರಡ್ಕ ಮಿತ್ತೂರು ಇವರ ಸಹಯೋಗದಲ್ಲಿ ಆ.17 ರಂದು ಕ್ರೀಡಾಕೂಟವು ಉಬರಡ್ಕ ಮಿತ್ತೂರು ಸ.ಹಿ.ಪ್ರಾ ಶಾಲೆಯಲ್ಲಿ ನಡೆಯಿತು.








ಬೆಳಗ್ಗೆ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಸುಮಿತ್ರ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಯುವತಿ ಮಂಡಲ ಉಬರಡ್ಕ ಮಿತ್ತೂರು ಇದರ ಅಧ್ಯಕ್ಷೆ ಶ್ರೀಮತಿ ತಾರಾ ಗಂಗಾಧರ್ ಭರ್ಜರಿಗುಂಡಿ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಉಬರಡ್ಕ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ಸೂಂತೋಡು, ಸುಳ್ಯದ ಯುವಜನ ಸಂಯುಕ್ತ ಮಂಡಳಿಯ ಪ್ರಧಾನ ಕಾರ್ಯದರ್ಶಿ ಶ್ರೀಮತಿ ನಮಿತ ಹರ್ಲಡ್ಕ, ನರಸಿಂಹ ಶಾಸ್ತಾವು ದೇವಾಲಯದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಸುರೇಶ್ ಎಂ.ಎಚ್, ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಭಾಸ್ಕರ ರಾವ್, ಯುವಕ ಮಂಡಲದ ಅಧ್ಯಕ್ಷ ಲೊಕೇಶ್ ಪಟ್ರುಕೋಡಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸಂಘದ ಐ.ಡಿ ಕಾರ್ಡ್ ಬಿಡುಗಡೆಗೊಳಿಸಲಾಯಿತು. ನಂತರ ಮಹಿಳೆಯರಿಗೆ ಮತ್ತು ಪುರುಷರಿಗೆ ಹಲವಾರು ಸ್ಪರ್ಧೆಗಳು ನಡೆಯಿತು.
ವರ್ಷ, ದ್ವಿತಿ ಪ್ರಾರ್ಥಿಸಿ, ಯುವಕ ಮಂಡಲದ ಪ್ರಧಾನ ಕಾರ್ಯದರ್ಶಿ ಪುನೀತ್ ಪೈಕ ಸ್ವಾಗತಿಸಿದರು. ಕೋಶಾಧಿಕಾರಿ ರಕ್ಷಿತ್ ಉಬರಡ್ಕ ವಂದಿಸಿದರು. ವಿಜಯಕುಮಾರ್ ಉಬರಡ್ಕ ಕಾರ್ಯಕ್ರಮ ನಿರೂಪಿಸಿದರು.










