







ಕಳ್ಳತನ ಪ್ರಕರಣದಲ್ಲಿ ಆರೋಪಿಯಾಗಿದ್ದು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಬೆಳ್ಳಾರೆ ಪೊಲೀಸ್ ಠಾಣಾ ಅ.ಕ್ರ. ಸಂಖ್ಯೆ: 56/2020, ಕಲಂ: 457, 380 r/w 34 ಐ.ಪಿ.ಸಿ (ಕಳವು) ಪ್ರಕರಣದಲ್ಲಿ ಆರೋಪಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೇ, ವಾರೆಂಟ್ ಜಾರಿಯಾಗಿದ್ದ ಉನ್ಮೇಶ ಎಂಬಾತನನ್ನು, ಬೆಳ್ಳಾರೆ ಠಾಣಾ ಪೊಲೀಸರು ಕೇರಳದಲ್ಲಿ ದಸ್ತಗಿರಿ ಮಾಡಿ, ನ್ಯಾಯಾಲಯಕ್ಕೆ ದಿನಾಂಕ: 17.08.2025ರಂದು ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುವುದಾಗಿ ತಿಳಿದು ಬಂದಿದೆ.










