ಮುಳ್ಯ ಅಟ್ಲೂರು ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

0

ಮುಳ್ಯ ಅಟ್ಲೂರು ಶಾಲೆಯಲ್ಲಿ ೭೯ನೇ ಸ್ವಾತಂತ್ರ್ಯ ದಿನಾಚರಣೆಯನ್ನು ನಡೆಸಲಾಯಿತು. ಎಸ್‌ಡಿಎಂಸಿ ಅಧ್ಯಕ್ಷ ಚಂದ್ರಶೇಖರರವರು ಧ್ವಜಾರೋಹಣಗೈದು ೭೯ನೇ ಸ್ವಾತಂತ್ರ್ಯ ದಿನಾಚರಣೆಯ ಶುಭ ಹಾರೈಸಿದರು. ರವಿಪ್ರಕಾಶ್ ಅಟ್ಲೂರುರವರು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದರು. ಶಾಲಾ ವಿದ್ಯಾರ್ಥಿಗಳಿಂದ ಪಥ ಸಂಚಲನ ಕಾರ್ಯಕ್ರಮ ನಡೆಯಿತು.


ಸಭಾ ಕಾರ್ಯಕ್ರಮದಲ್ಲಿ ರವಿಪ್ರಕಾಶ್ ಅಟ್ಲೂರು ಸ್ವಾತಂತ್ರ್ಯಕ್ಕಾಗಿ ಹೋರಾಡಿ ವೀರ ಮರಣವನ್ನಪ್ಪಿದ ನಾಯಕರುಗಳ ಬಗ್ಗೆ ತಿಳಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಗ್ರಾಮಪಂಚಾಯಿತಿ ಸದಸ್ಯರಾದ ವಿಶ್ವನಾಥ ಮುಳ್ಯ ಮಠರವರು ಮಾತನಾಡಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು.


ವೇದಿಕೆಯಲ್ಲಿ ಗ್ರಾಮಪಂಚಾಯಿತಿ ಸದಸ್ಯ ವಿಶ್ವನಾಥ ಮುಳ್ಯ ಮಠ, ಎಸ್ ಡಿ ಎಮ್ ಸಿ ಉಪಾಧ್ಯಕ್ಷೆ ಶ್ರೀಮತಿ ನೇತ್ರಾವತಿ, ಭಜನಾ ಮಂದಿರ ಮುಳ್ಯ ಅಟ್ಲೂರು ಇದರ ಉಪಾಧ್ಯಕ್ಷರು, ವರಮಹಾಲಕ್ಷ್ಮಿ ಪೂಜಾ ಸಮಿತಿ ಅಧ್ಯಕ್ಷೆ ಶ್ರೀಮತಿ ಪಾರ್ವತಿ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಹೇಮಾಮಾಲಿನಿ, ಎಸ್ ಡಿ ಎಮ್ ಸಿ ಸದಸ್ಯರು, ಪೋಷಕರು, ಹಳೆ ವಿದ್ಯಾರ್ಥಿಗಳು ಹಾಗೂ ಊರಿನ ವಿದ್ಯಾಭಿಮಾನಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಶಿಕ್ಷಕ ಪ್ರತಿನಿಧಿ ರವಿಕುಮಾರ್ ಮಕ್ಕಳಿಗೆ ಶಿಸ್ತುಬದ್ಧ ಜೀವನ ನಡೆಸಬೇಕೆಂದು ತಿಳಿಸಿ ಶುಭ ಹಾರೈಸಿದರು. ಮಕ್ಕಳಿಂದ ಹಾಡು, ನೃತ್ಯದಂತಹ ಮನೋರಂಜನಾ ಕಾರ್ಯಕ್ರಮಗಳು ಜರುಗಿದವು. ಸಂಸ್ಥೆಯ ಮುಖ್ಯ ಗುರುಗಳಾದ ಶ್ರೀಮತಿ ಅಲಕನಂದಿನಿ ಆಚಾರ್ಯ ವಂದಿಸಿದರು. ಅತಿಥಿ ಶಿಕ್ಷಕಿ ಶ್ರೀಮತಿ ವೀಣಾ ಕೆ. ಸ್ವಾಗತಿಸಿದರು. ಗೌರವ ಶಿಕ್ಷಕಿ ಅನುಷಾ ಭಾರ್ಗವಿ ಕಾರ್ಯಕ್ರಮ ನಿರೂಪಿಸಿದರು.