ಗುತ್ತಿಗಾರು ಶ್ರೀಕೃಷ್ಣ ಭಜನಾ ಮಂದಿರದಲ್ಲಿ 63ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮವು ಶ್ರೀಕೃಷ್ಣ ಭಜನಾ ಮಂದಿರ ಹಾಗೂ ಯುವಕ ಮಂಡಲ ಗುತ್ತಿಗಾರು ಇವರುಗಳ ಸಹಭಾಗಿತ್ವದಲ್ಲಿ ಆ.15 ರಂದು ನಡೆಸಲಾಯಿತು.
ಹಿರಿಯ ಭಜಕರಾದ ಮೋಹನ್ ಆಚಳ್ಳಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಶ್ರೀರಾಮ ಭಜನಾ ಮಂಡಳಿಯ ಗೌರವಾಧ್ಯಕ್ಷ ಗೋಪಾಲಕೃಷ್ಣ ಪಾರೆಮಜಲು ಅತಿಥಿಯಾಗಿ ಭಾಗವಹಿಸಿದ್ದರು.
ಯುವಕ ಮಂಡಲದ ಅಧ್ಯಕ್ಷರಾದ ಅಜಿತ್ ಬಾಕಿಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಭಜನಾ ಮಂದಿರದ ಗೌರವಾಧ್ಯಕ್ಷರಾದ ರವಿಪ್ರಕಾಶ್ ಬಳ್ಳಡ್ಕ ಸ್ವಾಗತಿಸಿ ಉಪಾಧ್ಯಕ್ಷರಾದ ನಿತ್ಯಾನಂದ ಕಾಂತಿಲ ವಂದಿಸಿದರು. ನಂತರ ಪುರುಷರಿಗೆ ಮೊಸರು ಕುಡಿಕೆ ಸೇರಿದಂತೆ ಇನ್ನಿತರ ಸ್ಪರ್ಧೆಗಳು ಹಾಗೂ ಮಹಿಳೆಯರಿಗೆ ಮತ್ತು ಮಕ್ಕಳಿಗೆ ವಿವಿಧ ಸ್ಪರ್ಧೆಗಳು ನಡೆದವು. ನಂತರ ಪುಟಾಣಿ ಮಕ್ಕಳಿಗೆ ಶ್ರೀಕೃಷ್ಣವೇಷ ಸ್ಪರ್ಧೆ ನಡೆಯಿತು.















ಸಂಜೆ ನಡೆದ ಕಾರ್ಯಕ್ರಮದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಭಜನಾ ಮಂದಿರದ ಅಧ್ಯಕ್ಷರಾದ ಪೂರ್ಣಚಂದ್ರ ಪೈಕ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ನಿರ್ಮಲಾ ಪದ್ಮನಾಭ ಪರಮಲೆ ಹಾಗೂ ಮೊಗ್ರ ಕನ್ನಡ ದೇವತೆ ಯಾನೆ ಪುರುಷ ದೈವ ದೈವಸ್ಥಾನದ ಮೊಕೇಸರರಾದ ಕಾರ್ಯಪ್ಪ ಗೌಡ ಚಿಕ್ಕುಳಿ ಉಪಸ್ಥಿತರಿದ್ದರು.
ನಂತರ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ವಿಜೇತ ಸ್ಪರ್ಧಿಗಳ ವಿವರವನ್ನು ಭಜನಾ ಮಂದಿರದ ನಿರ್ದೇಶಕರಾದ ಸುರೇಶ್ ಮುತ್ಲಾಜೆ ವಾಚಿಸಿದರು.
. ನಂತರ ಹಿರಿಯ ಭಜಕರನ್ನು ಸನ್ಮಾನಿಸಲಾಯಿತು.
ಶ್ರೀಕೃಷ್ಣ ಭಜನಾ ಮಂದಿರದ ಸಲಹಾ ಸಮಿತಿಯ ಸದಸ್ಯರಾದ ಶ್ರೀಧರ್.ಬಿ.ಕೆ ಸ್ವಾಗತಿಸಿ ಶ್ರೀಕೃಷ್ಣ ಭಜನಾ ಮಂದಿರದ ಕಾರ್ಯದರ್ಶಿ ಲೀಲಾಧರ ಅಡ್ಡನಪಾರೆ ವಂದಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಕಿಶೋರ್ ಕುಮಾರ್ ಪೈಕ ನೆರವೇರಿಸಿದರು
ಸಂಜೆ 6.00 ರಿಂದ ರಾತ್ರಿ 12:00 ಗಂಟೆಯವರೆಗೆ ಭಜನಾ ಕಾರ್ಯಕ್ರಮ ನಡೆಯಿತು.










