ಕುಕ್ಕುಜಡ್ಕದ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

0

ಕುಕ್ಕುಜಡ್ಕದ ಶ್ರೀ
ಮಹಾವಿಷ್ಣು ಭಜನಾ ಮಂಡಳಿ ವತಿಯಿಂದ ಆ.16 ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು.

ದೈವಸ್ಥಾನದ
ಮೊಕ್ತೇಸರರಾದ ಎಂ. ಜಿ ಸತ್ಯನಾರಾಯಣ ರವರು ದೀಪ ಪ್ರಜ್ವಲಿಸಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಕ್ಕಳಿಗೆ ಭಕ್ತಿ ಗೀತೆ, ಕೃಷ್ಣ ವೇಷ, ಮಹಿಳೆಯರಿಗೆ ಸಂಗೀತ ಕುರ್ಚಿ, ಪುರುಷರಿಗೆ ಹಾಗೂ ಮಹಿಳೆಯರಿಗೆ ಮೊಸರುಕುಡಿಕೆ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು. ನಂತರ ಶ್ರೀ ಮಹಾವಿಷ್ಣು ಭಜನಾ ಮಂಡಳಿ ವತಿಯಿಂದ ಭಜನಾ ಕಾರ್ಯಕ್ರಮ ನಡೆಯಿತು ನಂತರ ನಡೆದ ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಿಸಲಾಯಿತು. ಭಾಗವಹಿಸಿದ ಎಲ್ಲಾ ಮಕ್ಕಳಿಗೂ ಪ್ರೋತ್ಸಾಹಕ ಬಹುಮಾನ ನೀಡಲಾಯಿತು. ಎಲ್ಲ ಭಕ್ತಾದಿಗಳಿಗೆ ಉಪಹಾರ ಹಾಗೂ ಸಿಹಿತಿಂಡಿ ವಿತರಿಸಲಾಯಿತು. ಭಜನಾ ಮಂಡಳಿ ಸದಸ್ಯರು ಸಹಕರಿಸಿದರು.