ಕೆವಿಜಿ ಕಾನೂನು ಮಹಾವಿದ್ಯಾಲಯದ ಸಭಾಂಗಣದಲ್ಲಿ ಆ. ೧೮ರಂದು ಆ್ಯಂಟಿ ರ್‍ಯಾಗಿಂಗ್ ಸಪ್ತಾಹವನ್ನು ಉದ್ಘಾಟಿಸಲಾಯಿತು.
















ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾoಶುಪಾಲೆ ಶ್ರೀಮತಿ ಟೀನಾ ಎಚ್.ಎಸ್ ವಹಿಸಿದ್ದರು. ಸುಳ್ಯ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಸಂತೋಷ್ ಬಿ.ಪಿ ಕಾರ್ಯಕ್ರಮ ಉದ್ಘಾಟಿಸಿ ರಾಗಿಂಗ್ ಎನ್ನುವುದು ಶೈಕ್ಷಣಿಕ ಸಂಸ್ಥೆಗಳ ಸಾಮಾಜಿಕ ಪಿಡುಗು. ಇದನ್ನು ಹೋಗಲಾಡಿಸಿ ವಿದ್ಯಾರ್ಥಿಗಳ ನಡುವೆ ಸ್ನೇಹ, ಸೌಹಾರ್ದತೆ, ಸಾಮರಸ್ಯ ಬೆಳೆಸುವುದೇ ಚಿಟಿಣi- ಡಿಚಿggiಟಿg ಸಪ್ತಾಹದ ಗುರಿ ಎಂದರು. ಕಾಲೇಜಿನ ಆಡಳಿತಧಿಕಾರಿ ಪ್ರೊ. ಕೆ.ವಿ ದಾಮೋದರ ಗೌಡ ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಯೋಜಕಿ ಶ್ರೀಮತಿ ಕೃತಿಕಾ ಜೆ ವೈಪನ ಚಿಟಿಣi – ಡಿಚಿggiಟಿg ನ ಪ್ರತಿಜ್ಞಾ ವಿಧಿ ಭೋದಿಸಿದರು. ವಿದ್ಯಾರ್ಥಿ ಅನೀಷ ಪ್ರಾರ್ಥಿಸಿದರು. ವಿದ್ಯಾರ್ಥಿನಿ ಕು. ರಮ್ಯಾ ಸ್ವಾಗತಿಸಿದರು. ಕು ಸಮೀಕ್ಷಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಈ ಕಾರ್ಯಕ್ರಮ ದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ದವರು ಉಪಸ್ಥಿತರಿದ್ದರು.










