ಹಬ್ಬಗಳಲ್ಲಿ ಅನುಸರಿಸಬೇಕಾದ ಕಾನೂನು ನಿಯಮಗಳ ಬಗ್ಗೆ ವೃತ್ತ ನಿರೀಕ್ಷಕರಿಂದ ಗಣ್ಯರಿಗೆ ಮಾಹಿತಿ
ಶ್ರೀ ಗಣೇಶ್ ಚತುರ್ಥಿ ಹಾಗೂ ಈದ್ ಮೀಲಾದ್ ಹಬ್ಬದ ಅಂಗವಾಗಿ ಸುಳ್ಯ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆಯನ್ನು ಆ. 18 ರಂದು ನಡೆಸಲಾಯಿತು.
ಸುಳ್ಯ ವೃತ್ತ ನಿರೀಕ್ಷಕರಾದ ತಿಮ್ಮಪ್ಪ ನಾಯ್ಕ್ ರವರು ಸಭೆಯ ಅಧ್ಯಕ್ಷತೆಯನ್ನು ವಹಿಸಿ ಹಬ್ಬ ಆಚರಣೆಯ ಸಂಧರ್ಭ ಸಮಾಜ ದಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಅನುಸರಿಸಬೇಕಾದ ಕಾನೂನು ನಿಯಮಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂಧರ್ಭದಲ್ಲಿ ಮಾತನಾಡಿದ ಅವರು ಸಂಘಟಕರು ಕಾರ್ಯಕ್ರಮವನ್ನು ನಡೆಸಲು ಅನುಮತಿಯನ್ನು ಕೇಳುತ್ತೀರಿ. ನಡೆಸುವ ಮೊದಲು ನೀವು ಸುರಕ್ಷತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದಲೂ ಆಲೋಚನೆ ಮಾಡ ಬೇಕಾಗಿದೆ ಎಂದು ಹೇಳಿದರು.
ಕಾರ್ಯಕ್ರಮ ಆಯೋಜನೆ ಮಾಡುವವರು ಅಲ್ಲಿ ಅನುಸರಿಸುವ ಬಗ್ಗೆ ಮುಚ್ಚಳಿಕೆ ಪತ್ರ ನೀಡಬೇಕಾಗಿದೆ. ಕಡ್ಡಾಯವಾಗಿ ಪೊಲೀಸ್ ಅನುಮತಿ ಮತ್ತು ಸಮಯದ ನಿರ್ಬಂಧ ಪಾಲನೆ ಮಾಡಬೇಕು. ಪೊಲೀಸ್ ಹಾಗೂ ಇತರ ಸಂಬಂಧಿತ ಇಲಾಖೆಗಳ ಲಿಖಿತ ಅನುಮತಿ ಇಲ್ಲದೆ ಯಾವುದೇ ಕಾರ್ಯಕ್ರಮ ಅಥವಾ ಮೆರವಣಿಗೆ ನಡೆಸಬಾರದು.ಯಾವುದೇ ಕಾರಣಕ್ಕೂ ರಾತ್ರಿ 11:3೦ ಗಂಟೆಯ ನಂತರ ಯಾವುದೇ ಮೆರವಣಿಗೆಯನ್ನು ನಡೆಸಲು ಅನುಮತಿಸಲಾಗುವುದಿಲ್ಲ. ಅದನ್ನು ಮೀರಿ ಮಾಡಿದ್ದಲ್ಲಿ ಸಮಾವೇಶವನ್ನು ಕಾನೂನುಬಾಹಿರ ಸಮಾವೇಶವೆಂದು ಪರಿಗಣಿಸಲಾಗುವುದು. ಖಾಸಗಿ ಸ್ಥಳಗಳಲ್ಲಿ ಕಾರ್ಯಕ್ರಮ ನಡೆಸುವುದಕ್ಕೆ ಆ ಸ್ಥಳದ ಮಾಲೀಕರಿಂದ ನಿರಾಕ್ಷೇಪಣಾಪತ್ರ ಪಡೆದು ಪೊಲೀಸ್ ಠಾಣೆಗೆ ಹಾಜರುಪಡಿಸುವುದು ಕಡ್ಡಾಯವಾಗಿದೆ.

ಅನುಮೋದಿತ ಸ್ಥಳ ಅಥವಾ ಮಾರ್ಗದಲ್ಲಿಯೇ ಕಾರ್ಯಕ್ರಮ ನಡೆಸಬೇಕು. ಡಿ.ಜೆ ಸಂಪೂರ್ಣ ನಿಷೇಧ ವಿದ್ದು ಧ್ವನಿ ವರ್ಧಕಗಳಿಗೆ ಅನುಮತಿ ಅಗತ್ಯವಾಗಿರಲಿ.
ಡಿ.ಜೆ, ಜೋರಾದ ಸ್ಪೀಕರ್ ಅಥವಾ ಈ ರೀತಿಯ ಯಾವುದೇ ಧ್ವನಿವರ್ಧಕ ಉಪಕರಣಗಳ ಬಳಕೆ ಸಂಪೂರ್ಣ ನಿಷೇಧವಾಗಿದೆ. ಧ್ವನಿವರ್ಧಕ ಬಳಕೆಗೆ ಮುಂಚಿತವಾಗಿ ಅನುಮತಿ ಪಡೆಯುವುದು ಅಗತ್ಯವಿದೆ ಮತ್ತು ರಾತ್ರಿ ೧೦:೦೦ ಗಂಟೆಗೆ ಅವುಗಳನ್ನು ಸ್ಥಗಿತ ಗೊಳಿಸಬೇಕು. ಶಬ್ದ ಮಟ್ಟಗಳು ಈ ಮಿತಿಗಳ ಒಳಗಿರಬೇಕು: ವಾಣಿಜ್ಯ ಪ್ರದೇಶ – ೬೫ ಡೆಸಿಬಲ್. ವಾಸಸ್ಥಳ ೫೫ ಡೆಸಿಬಲ್, ನಿಶ್ಯಬ್ದ ವಲಯ – ೫೦ ಡೆಸಿಬಲ್ ಆಗಿರುತ್ತದೆ.
ಧಾರ್ಮಿಕ ವಿರೋಧಿ ಘೋಷಣೆಗಳು ಮತ್ತು ದ್ವೇಷ ಭಾಷಣ ದ್ವೇಷ ನಿಷೇಧ (ಮುದ್ರಣ & – ಸಾಮಾಜಿಕ ಮಾಧ್ಯಮದಲ್ಲಿ): ಯಾವುದೆ ಘೋಷಣೆಗಳು, ಭಿತ್ತಿಪತ್ರಗಳು, ಪ್ರದರ್ಶನಗಳು ಅಥವಾ ಸೋಷಿಯಲ್ ಮೀಡಿಯಾ ಪೋಸ್ಟ್ಗಳ ವಿಷಯಗಳು ಯಾವುದೇ ಧರ್ಮದ ವಿರೋಧ ಅಥವಾ ದ್ವೇಷವನ್ನು ಉಂಟು ಮಾಡುವ ರೀತಿಯಲ್ಲಿ ಇರಬಾರದು.
ಜನಸಂದಣಿಗೆ ಕಡ್ಡಾಯ ಸ್ವಯಂ ಸೇವಕರ ನೇಮಕಾತಿ: ಅನುಮತಿತ ಸಾಮರ್ಥ ಮೀರದಂತೆ ಜನ ಸಮೂಹ ನಿಯಂತ್ರಿಸಬೇಕು.
ಸಮರ್ಪಕವಾಗಿ ಸ್ವಯಂಸೇವಕರನ್ನು ನಿಯೋಜಿಸಿ ಕೊಳ್ಳಬೇಕು.
ಪೆಂಡಾಲ್ ಎತ್ತರ ನಿಯಮಗಳು ಮತ್ತು ವಾಹನ ಸುರಕ್ಷಾ ನಿಯಮ ಪಾಲನೆ: ಪೆಂಡಾಲು, ಕಾರ್ಯಕ್ರಮದಲ್ಲಿ ಬಳಸುವ ವಾಹನಗಳು ಇತ್ಯಾದಿಗಳ ಎತ್ತರಗಳ ಕಾನೂನು ಅಥವಾ ಮೆಸ್ಕಾಂ ಮಾನದಂಡಗಳನ್ನು ಮೀರುವಂತಿರಬಾರದು. ವಾಹನಗಳು ನೋಂದಣಿ ಪತ್ರ, ದೃಢತೆ ಪ್ರಮಾಣಪತ್ರ, ವಿಮೆ ಪತ್ರ ಹೊಂದಿರಬೇಕು.
ಅಗ್ನಿಶಾಮಕ ಮತ್ತು ತುರ್ತು ವ್ಯವಸ್ಥೆಗಳ ಒದಗಿಕೆ: ಅಗ್ನಿ ನಂದಕಗಳು, ಆಂಬುಲೆನ್ಸ್, ಪ್ರಥಮ ಚಿಕಿತ್ಸಾ ಪೆಟ್ಟಿಗೆ ಇಟ್ಟು ಕೊಳ್ಳುವುದು ಕಡ್ಡಾಯವಾಗಿವೆ. ಬೆಂಕಿಯ ಮೂಲಗಳ ಬಳಿಯಲ್ಲಿ ಸುಲಭವಾಗಿ ಹೊತ್ತಿಕೊಳ್ಳುವ ವಸ್ತುಗಳನ್ನು ಇರಿಸಬಾರದು. ವಿಷಕಾರಿ ಬಣ್ಣಗಳು, ನಿಷೇಧಿತ ರಾಸಾಯನಿಕಗಳು, ಏಕಬಳಕೆ ಪ್ಲಾಸ್ಟಿಕ್ ನಿಷೇದಿಸಲಾಗಿರುತ್ತದೆ.
ವಾಹನ ಸಂಚಾರ ಮುಕ್ತವಾಗಿ ನಿರ್ವಹಣೆ ಮತ್ತು ತುರ್ತು ಮಾರಉಂಟು ಮಾಡಬಾರದು. ನಿಗದಿತ ಸ್ಥಳದಲ್ಲಿಯೇ ಪಾರ್ಕಿಂಗ್ ವ್ಯವಸ್ಥೆ ಇರಬೇಕು.
ಸಾರ್ವಜನಿಕ/ ಖಾಸಗಿ ಆಸ್ತಿಗೆ ಹಾನಿ ಮಾಡಬಾರದು ಯಾವುದೇ ಸಾರ್ವಜನಿಕ ಅಥವಾ ಖಾಸಗಿ ಆಸ್ತಿಗೆ ಹಾನಿ ಯುಂಟು ಮಾಡಬಾರದು.
ಸಮಯ,ಕಾರ್ಯಕ್ರಮ ವಿವರ ಮತ್ತು ಪೊಲೀಸ್ ಸೂಚನೆ ಪಾಲನೆ: ಕಾರ್ಯಕ್ರಮದ ಪೂರ್ಣ ವಿವರಗಳನ್ನು ಮುಂಚಿತವಾಗಿ ನೀಡಬೇಕು ಅನುಮತಿ ಪತ್ರದಲ್ಲಿ ನೀಡಿದ ಸಮಯವನ್ನು ಕಡ್ಡಾಯವಾಗಿ ಪಾಲಿಸಬೇಕು.
ಎಲ್ಲಾ ಪೊಲೀಸ್ ಸೂಚನೆಗಳನ್ನು ಪಾಲಿಸಬೇಕು. ಮಹಿಳೆಯರ ಸುರಕ್ಷತೆಗೆ ಶೂನ್ಯ ಸಹಿಷ್ಣುತೆ ನೀತಿ: ಕಾರ್ಯಕ್ರಮದ ಸಮಯ ಮಹಿಳೆಯರ ಚುಡಾವಣೆ, ಹಿಂಬಾಲಿಸುವಿಕೆ, ಲೈಂಗಿಕ ಕಿರುಕುಳ ಮುಂತಾದ ಅಪರಾಧಗಳು ನಡೆಯದಂತ ನೋಡಿಕೊಳ್ಳಬೇಕು. ಸ್ವಚ್ಛತೆ, ಪ್ಲೆಕ್ಸ್ ಮತ್ತು ಬ್ಯಾನರ್ ನಿಯಂತಣ ಯಾವುದೇ ಬ್ಯಾನರ್ ಅಥವಾ ಪ್ಲೆಕ್ಸ್ ಅನ್ನು ಸಂಬಂಧಿತ ಪ್ರಾಧಿಕಾರದಿಂದ ಮುಂಚಿತ ಅನುಮತಿ ಇಲ್ಲದೆ ಹಾಕಬಾರದು. ಕಾರ್ಯಕ್ರಮ ಮುಗಿದ ತಕ್ಷಣ ಅವುಗಳನ್ನು ತೆರವುಗೊಳಿಸಿ ಸ್ವಚ್ಛಗೊಳಿಸಬೇಕು.















ಶಸ್ತ್ರಾಸ್ತ್ರಗಳು ಮತ್ತು ಅಪಾಯಕಾರಿಯಾದ ವಸ್ತುಗಳ ನಿಷೇಧ: ಕಾರ್ಯಕ್ರಮಗಳಲ್ಲಿ ಸಾರ್ವಜನಿಕ ಸ್ಥಳದಲ್ಲಿ ಶಸ್ತ್ರಾಸ್ತ್ರ, ಹರಿತವಾದ ಆಯುಧಗಳು ಇತ್ಯಾದಿ ಅಪಾಯಕಾರಿ ಆಯುಧಗಳ ಪ್ರದರ್ಶನ ಮತ್ತು ಸಾಗಾಟ ಮಾಡ ಬಾರದು ಡ್ರೋನ್ಗಳನ್ನು ಬಳಸಲು ಮುಂಚಿತ ಅನುಮತಿ ಕಡ್ಡಾಯ: ಮುಂಚಿತ ಅನುಮತಿ ಇಲ್ಲದೆ ಯಾವುದೇ ಡೋನ್ ಅಥವಾ Uಂಗಿ ಬಳಸುವುದು ನಿಷಿದ್ಧ.
ಮೆರವಣಿಗೆಯಲ್ಲಿ ಪ್ರಾಣಿಗಳ ಬಳಕೆಗೆ ನಿಯಂತ್ರಣ: ಮೆರವಣಿಗೆ ಅಥವಾ ಪ್ರದರ್ಶನಗಳಲ್ಲಿ ಪ್ರಾಣಿಗಳನ್ನು ಬಳಸಲು ಮುಂಚಿತ ಅನುಮತಿ ಪಡೆಯಬೇಕು ಮತ್ತು ಪ್ರಾಣಿಹಕ್ಕುಗಳ ನಿಯಮ ಪಾಲನೆ ಕಡ್ಡಾಯ.
ಪೊಲೀಸ್ ತಪಾಸಣೆಗೆ ಅಡ್ಡಿ ಮಾಡುವುದು ನಿಷೇಧ: ಪೊಲೀಸರು ಅಥವಾ ಅಧಿಕೃತ ಅಧಿಕಾರಿಗಳು ಯಾವುದೇ ಸಮಯದಲ್ಲಿ ಸ್ಥಳವನ್ನುತಪಾಸಣೆ ಮಾಡಬಹುದು. ಅದಕ್ಕೆ ಅಡ್ಡಿ ಪಡಿಸಬಾರದು.
ಆಯೋಜಕರು ಮತ್ತು ಸಾರ್ವಜನಿಕರು ಯಾವುದೇ ಸಂಶಯಾಸ್ಪದ ಚಟುವಟಿಕೆ, ಸುಳ್ಳುಮಾಹಿತಿ ಅಥವಾ ಗಲಭೆಗಳನ್ನು ಹತ್ತಿರದಪೊಲೀಸ್ ಠಾಣೆಗೆ ಅಥವಾ ೧೧೨ ಗೆ ಕರಿ ಮಾಡಿ ವರದಿ ಮಾಡಬೇಕು.
ಆಯೋಜಕರು ಸ್ಥಳದಲ್ಲಿ ೨೪x೭ ಭದ್ರತಾ ಸಿಬ್ಬಂದಿ ಯನ್ನು ನಿಯೋಜಿಸಬೇಕು. ಸಿಸಿ ಟಿವಿ ಕ್ಯಾಮರಾಗಳನ್ನು ಅಳವಡಿಸಬೇಕು ಹಾಗೂ ೩೦ ದಿನಗಳ ಕಾಲ ದೃಶ್ಯಾವಳಿ ಸಂಗ್ರಹಿಸಬೇಕು.
ಠಾಣೆಗೆ ನೀಡಿದ ಪತ್ರದಲ್ಲಿ ತಿಳಿಸಿದಷ್ಟೇ ಜನ ಸಭೆಯನ್ನುದ್ದೇಶಿಸಿ ಮಾತನಾಡತಕ್ಕದ್ದು, ಹೊರತು ಉಳಿದವರು ಕಾನೂನು ಬಾಹಿರವಾಗಿ ಮಾತನಾಡಿದ್ದಲ್ಲಿ ಕಾನೂನಿನ ಅಡಿಯಲ್ಲಿ ಕ್ರಮ ಜರುಗಿಸಲಾಗುವುದು.
ವಿಧಿಸಲಾದ ಯಾವುದೇ ಷರತ್ತುಗಳ ಉಲ್ಲಂಘನೆಯು ಭಾರತೀಯ ನ್ಯಾಯ ಸಂಹಿತೆ ೨೦೨೩, ಕರ್ನಾಟಕ ಪೊಲೀಸ್ ಕಾಯ್ದೆ ೧೯೬೩, ಪರಿಸರ ಸಂರಕ್ಷಣಾ ಕಾಯ್ದೆ ೧೯೮೬. ಮೋಟಾರು ವಾಹನ ಕಾಯ್ದೆ ೧೯೮೮, ಮಾಹಿತಿ ತಂತ್ರಜ್ಞಾನ ಕಾಯ್ದೆ ೨೦೦೦, ಶಸ್ತ್ರಾಸ್ತ್ರ ಕಾಯ್ದೆ ೧೯೫೯, ಡೋನ್ ನಿಯಮಗಳು ೨೦೨೧, ಸ್ಫೋಟಕಗಳ ಕಾಯ್ದೆ ೧೮೮೪. ಪ್ರಾಣಿ ಹಿಂಸೆ ತಡೆಕಾಯ್ದೆ ೧೯೬೦ ಮತ್ತು ಇತರ ಸಂಬಂಧಿತ ಕಾನೂನುಗಳ ಅಡಿಯಲ್ಲಿ ಕಠಿಣ ಕಾನೂನುಕ್ರಮಕ್ಕೆ ಒಳ ಪಡಿಸಲಾಗುವುದು.
(ನಿಮ್ಮ ಸಂಘಟನೆಯ ಪರವಾಗಿ ನೀಡಿದ ಪತ್ರದಲ್ಲಿ ತಿಳಿಸಿದಷ್ಟೇ ಜನರು ಸಭೆ/ಪ್ರತಿಭಟನೆ ಭಾಗವಹಿಸುವುದು, ಹೊರತು ಹೆಚ್ಚುವರಿಯಾಗಿ ಜನರು ಕಾನೂನು ಬಾಹಿರವಾಗಿ ಭಾಗವಹಿಸುವಂತಿಲ್ಲ, ಭಾಗವಹಿಸಿದ್ದಲ್ಲಿ/ಸೇರಿದಲ್ಲಿ ಭಾರತೀಯ ನ್ಯಾಯ ಸಂಹಿತೆ ಕಲಂ: ೧೮೯ ರಡಿ ಅಕ್ರಮ ಕೂಟ ಎಂದು ಪರಿಗಣಿಸಿ ವಿಳಂಬವಿಲ್ಲದೆ ಕಾನೂನು ಕ್ರಮ ಜರುಗಿಸಲಾಗುವುದು) ನಿಬಂಧನೆಗಳ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಠಾಣಾ ಉಪ ನಿರೀಕ್ಷಕ ಸಂತೋಷ್ ಉಪಸ್ಥಿತರಿದ್ದರು.
ಸಭೆಯಲ್ಲಿ ಜಯಕರ ಮಡ್ತಿಲ,ಶೀನಪ್ಪ ಎನ್, ಕಿಶೋರ್ ಬಿ ಎಸ್,ರಾಕೇಶ್ ಕುಂಟಿಕ್ಕಾನ,ಬಾಲ ಗೋಪಾಲ ಸೇರ್ಕಜೆ,ಹರೀಶ್, ಮಿಥುನ್,ಮಣಿ ಪ್ರಶಾದ್ ಮರ್ಕಂಜ,ಅಶ್ರಫ್ ಎಲಿಮಲೆ,ಹನೀಫ್ ಎಸ್ ಎ, ಉಮ್ಮರ್ ಕೆ ಎಸ್, ಮೊಹಮ್ಮದ್ ಇಕ್ಬಾಲ್ ಎಲಿಮಲೆ, ಮಹಮ್ಮದ್ ಕುಂಞಿ ಗೂನಡ್ಕ, ಜಿ ಕೆ ಹಮೀದ್,ರಘು ನಾಥ್ ಜಟ್ಟಿಪಳ್ಳ,ದೇವಿ ಪ್ರಸಾದ್,ಇಕ್ಬಾಲ್ ಸುಣ್ಣ ಮೂಲೆ, ರಶೀದ್ ಜಟ್ಟಿ ಪಳ್ಳ, ತೀರ್ಥ ರಾಮ ಅಡ್ಕ ಬಳೆ, ಎಸ್ ಕೆ ಹನೀಫ್ ಮೊದಲಾದವರು ಭಾಗವಹಿಸಿದ್ದರು.










