ಬೆಳ್ಳಾರೆ: ಸ್ತನ್ಯಪಾನ ಸಪ್ತಾಹ ಅಂಗವಾಗಿ ಮಾಹಿತಿ ಕಾರ್ಯಕ್ರಮ ಮತ್ತು ಆಟಿದ ಕೂಟ

0

ಗ್ರಾಮ ಪಂಚಾಯತ್ ಬೆಳ್ಳಾರೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ ಮತ್ತು ಸ್ನೇಹಶ್ರೀ ಮಹಿಳಾ ಮಂಡಲ ಬೆಳ್ಳಾರೆ ಇದರ ಸಂಯುಕ್ತ ಆಶ್ರಯದಲ್ಲಿ ಆ.19ರಂದು ಬೆಳ್ಳಾರೆ ಗ್ರಾಮ ಪಂಚಾಯತು ಗ್ರಂಥಾಲಯ ಮತ್ತು ಅರಿವು ಕೇಂದ್ರದಲ್ಲಿ ಜರಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ನೇಹಶ್ರೀ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ಪಡ್ಪು ವಹಿಸಿದ್ದರು. ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ನಮಿತಾ ಎಲ್. ರೈ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಬೆಳ್ಳಾರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್ ಸಿ.ವಿ. ಸಂಪನ್ಮೂಲ ವ್ಯಕ್ತಿಯಾಗಿ ಕೆ.ವಿ. ಜಿ. ಮೆಡಿಕಲ್ ಕಾಲೇಜು & ಆಸ್ಪತ್ರೆ ಡಾ| ಅದಿತಿ ಸ್ತನ್ಯಪಾನದ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆಯ ಆರೋಗ್ಯ ಸುರಕ್ಷಾಧಿಕಾರಿ ವಸಂತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಆಟಿ ಕೂಟದ ಅಂಗವಾಗಿ ಆಹಾರ ಪದಾರ್ಥ ಗಳ ಪ್ರದರ್ಶನ ಮತ್ತು ಸ್ಪರ್ಧೆ ನಡೆಸಿ ವಿಜೇತ ರಿಗೆ ಬಹುಮಾನ ನೀಡಲಾಯಿತು. ತೀರ್ಪುಗಾರರಾಗಿ ಶ್ರೀಮತಿ ಕಮಲಾವತಿ ಸಹಕರಿಸಿದರು. ಮಹಿಳಾ ಮಂಡಲ ಸದಸ್ಯೆ ಪೂರ್ಣಿಮ ಪೆರುವಾಜೆ ಪ್ರಾರ್ಥಿಸಿದರು.

ಕೋಶಾಧಿಕಾರಿ ಕುಸುಮ ಕುರುಂಬುಡೇಲು ಸ್ವಾಗತಿಸಿ, ಪೂರ್ವಾಧ್ಯಕ್ಷರಾದ ಶೋಭನಾ ಪನ್ನೆ ವಂದಿಸಿದರು. ಗ್ರಂಥಪಾಲಕಿ ಶಶಿಕಲ ಕಾರ್ಯಕ್ರಮ ನಿರೂಪಿಸಿದರು.