ಸುಳ್ಯ: ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದಿ. ದೇವರಾಜು ಅರಸು ಜನ್ಮದಿನಾಚರಣೆ

0

ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಆ.20ರಂದು ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದಿ. ದೇವರಾಜು ಅರಸುರವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.

ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆಯವರು ಅಧ್ಯಕ್ಷತೆ ವಹಿಸಿದ್ದರು.

ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಜಿ ಕೆ ಹಮೀದ್ ಮಾತನಾಡಿ ರಾಜೀವ್ ಗಾಂಧಿ ಮತ್ತು ದಿ. ದೇವರಾಜು ಅರಸು ರವರು ನಮ್ಮ ನಾಡು ಕಂಡ ಧೀಮಂತ ವ್ಯಕ್ತಿತ್ವ. ಅವರು ನಮಗೆಲ್ಲರಿಗೂ ಆದರ್ಶಪ್ರಾಯರು. ಹಾಗೂ ಅವರುಗಳ ಜನ್ಮ ದಿನಾಚರಣೆಯನ್ನು ಆಚರಿಸುವ ಮೂಲಕ ನೆನೆಪಿಸಿಕೊಳ್ಳುವುದು ನಮ್ಮ ಕರ್ತವ್ಯವಾಗಿದೆ ಎಂದು ಹೇಳಿದರು.

ಕಾಂಗ್ರೆಸ್ ಮುಖಂಡ ಆರ್ ಕೆ ಮೊಹಮ್ಮದ್, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ದಿನೇಶ್ ಅಂಬೆಕಲ್ಲು,
ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ಜಯಪ್ರಕಾಶ್ ನೆಕ್ರಪ್ಪಾಡಿ ಮಾತನಾಡಿದರು.

ಈ ಸಂದರ್ಭದಲ್ಲಿ ನಗರ ಪಂಚಾಯತ್ ಸದಸ್ಯರಾದ ಡೇವಿಡ್ ಧೀರಾ ಕ್ರಾಸ್ತ, ಶರೀಪ್ ಕಂಠಿ, ರಾಜು ಪಂಡಿತ್, ಕಾಯರ್ತೋಡಿ ದೇವಸ್ಥಾನ ಸದಸ್ಯ ಜತ್ತಪ್ಪ ರೈ, ಎಸ್ ಸಿ ಘಟಕ ಅಧ್ಯಕ್ಷ ಮಹೇಶ್ ಬೆಳ್ಳಾರ್ಕರ್, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಅಬ್ಬಾಸ್ ಅಡ್ಕ, ರಕ್ಷಿತ್ ದೊಡ್ಡಡ್ಕ, ಮಂಜುನಾಥ್ ಮಡ್ತಿಲ, ಸಂಪಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಎಸ್ ಕೆ ಹನೀಫ್, ಕೇಶವ ಮೊರಂಗಲ್ಲು, ಕೊರಗಪ್ಪ ಕೊಯಿಲ, ಗಂಗಾಧರ ಮೇನಾಲ ಉಪಸ್ಥಿತರಿದ್ದರು. ದ. ಕ ಜಿಲ್ಲಾ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಕಾರ್ಯದರ್ಶಿ ಭವಾನಿಶಂಕರ್ ಕಲ್ಮಡ್ಕ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಎನ್ ಎಸ್ ಯು ಐ ಅಧ್ಯಕ್ಷ ಧನುಷ್ ಕುಕ್ಕೇಟಿ ವಂದಿಸಿದರು.