ಕಳೆದ ಸಾಲಿನಲ್ಲಿ ನಡೆದ ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಎಲ್ಲಾ ವಿಭಾಗಗಳನ್ನು ಪ್ರತಿನಿಧಿಸಿ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ ಗುತ್ತಿಗಾರು ಸರಕಾರಿ ಮಾದರಿ ಪಿಎಂಶ್ರೀ ಶಾಲೆಯ 7ನೇ ತರಗತಿಯ ಆಂಗ್ಲ ಮಾಧ್ಯಮ ವಿದ್ಯಾರ್ಥಿ ಸೀಮಂತ್ ಡಿ.ಹೆಚ್ ಇವರನ್ನು ಸುಳ್ಯದ ಯುವಜನ ಸಂಯುಕ್ತ ಮಂಡಳಿಯಲ್ಲಿ ಆ. 20 ರಂದು ನಡೆದ ನಿರ್ದೇಶಕರ ಕುಟುಂಬ ಸಮ್ಮಿಲನ ಕಾರ್ಯಕ್ರಮದಲ್ಲಿ ಮಂಡಳಿಯ ಪೂರ್ವ ಅಧ್ಯಕ್ಷ ಚಂದ್ರಶೇಖರ ಪನ್ನೇ ಅವರು ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಿದರು.















ಈ ಸಂದರ್ಭದಲ್ಲಿ ಮಂಡಳಿ ಅಧ್ಯಕ್ಷ ವಿಜಯಕುಮಾರ್ ಉಬರಡ್ಕ, ಗೌರವಾಧ್ಯಕ್ಷ ಪ್ರವೀಣ್ ಕುಮಾರ್ ಜಯನಗರ, ಪೂರ್ವ ಅಧ್ಯಕ್ಷ ದಿಲೀಪ್ ಬಾಬ್ಲುಬೆಟ್ಟು, ಪ್ರಧಾನ ಕಾರ್ಯದರ್ಶಿ ನಮಿತಾ ಹರ್ಲಡ್ಕ, ಕಾರ್ಯಕ್ರಮದ ಉಸ್ತುವಾರಿ ನಿರ್ದೇಶಕರುಗಳಾದ ವಿನುತಾ ಪಾತಿಕಲ್ಲು ಹಾಗೂ ಲೋಹಿತ್ ಬಾಳಿಕಳ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.
ಈತ ಮಂಡಳಿಯ ನಿರ್ದೇಶಕ ದಿನೇಶ್ ಹಾಲೆಮಜಲು ಹಾಗೂ ಹೇಮಲತಾ ದಂಪತಿಯ ಪುತ್ರ.










