ಗಣೇಶ ಹಬ್ಬ ಆಚರಣೆ : ಸುಳ್ಯ‌ ನ.ಪಂ. ಪ್ರಕಟಣೆ

0

ಆ.27ರಂದು‌ ಗಣೇಶೋತ್ಸವ ಆಚರಣೆ ನಡೆಯಲಿದ್ದು, ಸಾರ್ವಜನಿಕರಿಗೆ ಸುಳ್ಯ‌ನಗರ ಪಂಚಾಯತ್ ಕೆಲವೊಂದು ಸೂಚನೆಗಳನ್ನು‌ ನೀಡಿ ಪ್ರಕಟಣೆ ಹೊರಡಿಸಿದೆ.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಂಗಳೂರು ಇದರ ನಿಯಮಾವಳಿ 2025 ರಂತೆ ಗಣೇಶ್ ಚತುರ್ಥಿ ಆಚರಣೆಯ ಸಂದರ್ಭ ಪರಿಸರ ಸಂರಕ್ಷಣೆಯ ಹಿತದೃಷ್ಟಿಯಿಂದ ಈ ಕೆಳಗಿನ ಸೂಚನೆಯನ್ನು ಪಾಲಿಸುವಂತೆ ಸಾರ್ವಜನಿಕರಲ್ಲಿ ವಿನಂತಿಸಿದೆ.

ಪ್ಲಾನ್ಸರ್ ಆಫ್ ಪ್ಯಾರೀಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ತಯಾರಿಸಬಾರದೆಂದು ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಿಲ ಮಾಲಿನ್ಯ (ನಿವಾರಣಾ ಮತ್ತು ನಿಯಂತ್ರಣಾ)ಕಾಯ್ದೆ 1974ರ ಕಲಂ 33(ಎ)ಅನ್ವಯ ರಾಜ್ಯದ ಯಾವುದೇ ಜಲ ಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್ ಮತ್ತು ಬಣ್ಣ ಲೇಪಿತ ವಿಗ್ರಹಗಳನ್ನು ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಐ. ಪಿ. ಸಿ ಸೆಕ್ಷನ್ 1860ರ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು.

ಗೌರಿ ಗಣೇನ ಹಬ್ಬದ ಸಂದರ್ಭಗಳಲ್ಲಿ ಬಣ್ಣ ರಹಿತ ಮಣ್ಣಿನ/ ನೈಸರ್ಗಿಕ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ, ತದನಂತರ ಗೌರಿ ಗಣೇಶ ಮೂರ್ತಿಗಳನ್ನು ಸುಳ್ಯ ಪಟ್ಟಣ ಪಂಚಾಯತ ನಿಗದಿಪಡಿಸಿರುವ ಸ್ಥಳಗಳಲ್ಲಿ ಮಾತ್ರವೇ ವಿಗ್ರಹಗಳನ್ನು ವಿಸರ್ಜಿಸುವುದು.

ಗೌರಿ ಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಸಂದರ್ಭದಲ್ಲಿ ಹಸಿ ಕಸ (ಹೂ, ಹಣ್ಣು ಬಾಳೆಕಂಬ, ಮಾವಿನ ತೋರಣ ಇತ್ಯಾದಿ ಅಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೆ, ಸುಳ್ಯ ಪಟ್ಟಣ ಪಂಚಾಯತ್ ನ ಕಸ ಸಂಗ್ರಹಣ ವಾಹನಕ್ಕೆ ನೀಡುವುದು.

ಸಾರ್ವಜನಿಕವಾಗಿ ನಡೆಸುವ ಗಣೇಶ ಮೂರ್ತಿಯ ಉತ್ಸವದ ಚಪ್ಪರಕ್ಕೆ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡಬೇಡಿ.

ರಾಜ್ಯದಲ್ಲಿ ನಿಷೇಧಿಸಲಾದ ಏಕ ವಚನಬಳಕೆ ಪ್ಲಾಸ್ಟಿಕ್ ವಸ್ತುಗಳನ್ನು ಯಾವುದೇ ಕಾರಣಕ್ಕೂ ಬಳಸದೇ ಇರುವುದು ಮತ್ತು ಬಳಸಿದಲ್ಲಿ ಸೂಕ್ತ ದಂಡವನ್ನು ಸ್ಥಳೀಯ ಸಂಸ್ಥೆಗಳ ಮೂಲಕ ವಿಧಿಸಲಾಗುವುದು ಎಂದು ಮುಖ್ಯಾಧಿಕಾರಿ ಗಳು ತಿಳಿಸಿದ್ದಾರೆ.