ಅಡಿಕೆ ‘ಹಳದಿ ರೋಗ’ ಮತ್ತು ಎಲೆಚುಕ್ಕಿ ರೋಗದ ಸಮಸ್ಯೆಯ ಕುರಿತು ಕೇಂದ್ರ ಕೃಷಿ ಸಚಿವರಿಗೆ ವಿವರಿಸಿದ ದ.ಕ ಸಂಸದ ಕ್ಯಾ.ಚೌಟ

0

ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ನಡೆದ ಸಂಸದರ ಸಭೆಯಲ್ಲಿ ಅಡಿಕೆ ಬೆಳೆಯುವ ಪ್ರದೇಶದ ‘ಹಳದಿ ರೋಗ’ ದಿಂದ ರೈತರು ಅನುಭವಿಸುತ್ತಿರುವ ಸಮಸ್ಯೆಯ ಕುರಿತು ಕೇಂದ್ರ ಸಚಿವರಿಗೆ ದ.ಕ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ವಿವರಣೆಯನ್ನು ನೀಡಿದರು.

ಮಂಗಳೂರು ಮತ್ತು ಕರ್ನಾಟಕದ ಇತರ ಭಾಗದಲ್ಲಿ ಅಡಿಕೆ ಬೆಳೆಯುವ ಪ್ರದೇಶದಲ್ಲಿ ವ್ಯಾಪಕವಾಗಿ ಪಸರಿಸಿರುವ ಹಳದಿ ಎಲೆ ರೋಗ ಮತ್ತು ಎಲೆಚುಕ್ಕಿ ರೋಗದ ತೀವ್ರ ಪರಿಣಾಮದ ಕುರಿತು ಸಚಿವರ ಜೊತೆಗೆ ಸಂಸದ ಕ್ಯಾ ಬ್ರಿಜೇಶ್ ಚೌಟ ಚರ್ಚಿಸಿದರು.

ಈ ಸಮಸ್ಯೆ ಕುರಿತು ಸಂಸದ ಕ್ಯಾ.ಚೌಟರು ಮೊದಲಿನಿಂದಲೂ ಹೋರಾಡುತ್ತಿದ್ದು, ಮತ್ತೊಮ್ಮೆ ಇದರ ಗಂಭೀರತೆಯನ್ನು ಸಚಿವರಿಗೆ ಮನವರಿಕೆ ಮಾಡಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಶಯ ‘ಆತ್ಮನಿರ್ಭರ ಭಾರತ’ದ ಕನಸಿಗೆ ರೈತರೂ ಕೂಡಾ ಕೊಡುಗೆ ನೀಡಲು, ಅವರ ಜೀವನೋಪಾಯವನ್ನು ರಕ್ಷಿಸಲು ಒಂದು-ಬಾರಿ ಪರಿಹಾರ ಪ್ಯಾಕೇಜ್ ಮತ್ತು ದೀರ್ಘಕಾಲೀನ ಪರಿಹಾರಗಳನ್ನು ಒದಗಿಸುವಂತೆ ಮನವಿ ಮಾಡಿದರು.ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ, ವಿ.ಸೋಮಣ್ಣ ಸಂಸದರಾದ ಬಿವೈ ರಾಘವೇಂದ್ರ, ಕೋಟಾ ಶ್ರೀನಿವಾಸ್ ಪೂಜಾರಿ,ವಿಶ್ವೇಶ್ವರ ಹೆಗಡೆ ಕಾಗೇರಿ, ಸಿಯಂ ಉದಾಸಿ,ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೋಡ್ಗಿ ಮತ್ತಿತರರು ಉಪಸ್ಥಿತರಿದ್ದರು. ಈ ವೇಳೆ ಕೇಂದ್ರ ಅಧ್ಯಯನ ತಂಡ ಸದ್ಯದಲ್ಲೇ ಜಿಲ್ಲೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಲಿದ್ದಾರೆಂದು ತಿಳಿದುಬಂದಿದೆ.