ಗುತ್ತಿಗಾರು : ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಾಗೂ ಉಚಿತ ದಂತ ಚಿಕಿತ್ಸಾ ಶಿಬಿರ

0

ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ರಿ.ಗುತ್ತಿಗಾರು ಇದರ ವತಿಯಿಂದ ಗ್ರಾಮ ಪಂಚಾಯತ್ ಗುತ್ತಿಗಾರು, ಅರೋಗ್ಯ ಕೇಂದ್ರ ಗುತ್ತಿಗಾರು, ಜಿಲ್ಲಾ ಮತ್ತು ತಾಲೂಕು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮಂಗಳೂರು, ಸುಳ್ಯ ಅಮರ ಸಂಜೀವಿನಿ ಗ್ರಾಮ ಮಟ್ಟದ ಒಕ್ಕೂಟ ಗುತ್ತಿಗಾರು, ಲಯನ್ಸ್ ಕ್ಲಬ್ ಹಿರಿಯಡ್ಕ, ಲಯನ್ಸ್ ಕ್ಲಬ್ ಗುತ್ತಿಗಾರು. ಸಪ್ತ ಶ್ರೀ ಸ್ಪೋರ್ಟ್ಸ್ ಕ್ಲಬ್ ಗುತ್ತಿಗಾರು ಇವರ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ, ರಕ್ತದಾನಿಗಳಿಗೆ ಗೌರವ ಸಮರ್ಪಣೆ ಮತ್ತು ಸನ್ಮಾನ ಕಾರ್ಯಕ್ರಮವು ಪ. ವರ್ಗದ ಸಭಾಭವನ ಗುತ್ತಿಗಾರು ಇಲ್ಲಿ ಇತ್ತೀಚಿಗೆ ನಡೆಯಿತು.

ಈ ಸಂದರ್ಭದಲ್ಲಿ ಹಲವಾರು ಜನ ರಕ್ತದಾನ ಮಾಡುವ ಮೂಲಕ ಇನ್ನೊಂದು ಜೀವಕ್ಕೆ ಪುನರ್ಜನ್ಮ ನೀಡಿದರು. ಕಾರ್ಯಕ್ರಮವನ್ನು ಹಾಲಿ ಸೈನಿಕ ಹರ್ಷಿತ್ ಎಲಿಮಲೆ ದೀಪ ಬೆಳಗಿಸಿ ಉದ್ಘಾಟನೆ ಮಾಡಿದರು. ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಂಶುಪಾಲ ವೆಂಕಪ್ಪ ಮಾಸ್ಟರ್ ಕೇನಾಜೆ,ನಿವೃತ್ತ ಸೈನಿಕ ರವೀಂದ್ರ ಮರಕ್ಕಡ, ಕೇಶವ ಗೌಡ ಕಣ್ಕಲ್ ಅವರನ್ನು ಗೌರವಿಸಲಾಯಿತು. ರಕ್ತದಾನ ಮಾಡಿದ ಪ್ರತಿಯೊಬ್ಬರನ್ನು ಗೌರವಿಸಲಾಯಿತು. ಹಲವಾರು ಮಂದಿರ ದಂತ ಚಿಕಿತ್ಸಾ ಶಿಬಿರದ ಪ್ರಯೋಜನ ಪಡೆದುಕೊಂಡರು

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಗುತ್ತಿಗಾರು ಸಹಕಾರಿ ಸಂಘದ ಮಾಜಿ ಅಧ್ಯಕ್ಷ ವೆಂಕಟ್ ದಂಬೆಕೋಡಿ, ತಾಲೂಕು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಭಾಪತಿ ಸುಧಾಕರ್ ಹಿರಿಯಡ್ಕ, ರವೀಂದ್ರನಾಥ್ ಸುಧೀರ್, ಗುತ್ತಿಗಾರು ಲಯನ್ಸ್ ಅಧ್ಯಕ್ಷ ಪ್ರವೀಣ್ ಮುಂಡೋಡಿ, ಅಮರ ಸಂಜೀವಿನಿ ಒಕ್ಕೂಟ ಉಪಾಧ್ಯಕ್ಷೆ ಶಿಶಿಮ ಜಾಕೆ, ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಅಧ್ಯಕ್ಷ ಚಂದ್ರಶೇಖರ ಕಡೋಡಿ, ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮಿತ್ರಾ ಮೂಕಮಲೆ, ಕೆ. ವಿ. ಜಿ. ದಂತ ಮಹಾವಿದ್ಯಾಲಯದ ವೈದ್ಯ ಡಾ. ರಕ್ಷಿತ್, ಮಂಗಳೂರು ರೆಡ್ ಕ್ರಾಸ್ ಪ್ರಮುಖ್ ಪ್ರವೀಣ್, ಟ್ರಸ್ಟ್ ಕೋಶಾಧಿಕಾರಿ ಸುಕುಮಾರ್ ಕೊಡೋಮ್ ಬು, ಮೋಹನ್ ಮುಕ್ಕೂರು ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು. ಅಮರ ಚಾರಿಟೇಬಲ್ ಉಪಾಧ್ಯಕ್ಷ ಮೋಹನ್ ದಾಸ್ ಶಿರಾಜೆ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ದಿವ್ಯಾ ಹರೀಶ್ ಚತ್ರಪ್ಪಾಡಿ ಪ್ರಾರ್ಥಿಸಿದರು. ಕಲ್ಪನ ಎರ್ದಡ್ಕ ಕಾರ್ಯಕ್ರಮ ನಿರೂಪಿಸಿದರು.