














ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಎಒಎಲ್ಇ ಸ್ಥಾಪಕಾಧ್ಯಕ್ಷ ಡಾ. ಕುರುಂಜಿ ವರಂಕಟ್ರಮಣ ಗೌಡರ ಪತ್ನಿ ದಿ. ಜಾನಕಿ ವೆಂಕಟ್ರಮಣ ಗೌಡರ 13ನೇ ಪುಣ್ಯಸ್ಮರಣೆ ಕಾರ್ಯಕ್ರಮ ಅಗಸ್ಟ್ 22ರಂದು ನಡೆಯಿತು.
ಎಒಎಲ್ಇ ಅಧ್ಯಕ್ಷ ಡಾ. ಕೆ.ವಿ ಚಿದಾನಂದ ಪೂಜ್ಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ದಿವಂಗತರನ್ನು ಸ್ಮರಿಸಿಕೊಂಡರು. ಈ ಸಂದರ್ಭದಲ್ಲಿ ಕಾಲೇಜಿನ ಮೆಡಿಕಲ್ ಸೂಪರಿಂಟೆಂಡೆಂಟ್ ಪ್ರೊ. ಡಾ. ಸಿ ಆರ್ ಭಟ್, ಆರ್ಥೋಪೆಡಿಕ್ ವಿಭಾಗದ ಪ್ರೊ. ಡಾ ಸುಬ್ರಮಣ್ಯ ಸೇರಿದಂತೆ ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.










