ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

0

ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಶಿಶುವಿಹಾರದ ಮಕ್ಕಳಿಗೆ ಮುದ್ದುಕೃಷ್ಣ ವೇಷ ಸ್ಪರ್ಧೆಯನ್ನು ಆ.23ರಂದು ಆಯೋಜಿಸಲಾಯಿತು. ಕಾರ್ಯಕ್ರಮಕ್ಕೆ ಶಾಲಾ ಆಡಳಿತ ಮಂಡಳಿಯ ಸಂಚಾಲಕ ಡಾ. ರೇಣುಕಾಪ್ರಸಾದ್ ಕೆ.ವಿ ಶುಭ ಹಾರೈಸಿದರು.

       ಈ ಸಂದರ್ಭದಲ್ಲಿ ಮುದ್ದು  ಕೃಷ್ಣ ವೇಷ ಹಾಕಿದ ಪುಟಾಣಿಗಳು ಎಲ್ಲರ ಮನ ಸೆಳೆದರು. ಭಾಗವಹಿಸಿದ ಎಲ್ಲಾ ಪುಟಾಣಿಗಳಿಗೆ ಸಮಾಧಾನಕರ ಬಹುಮಾನವನ್ನು ಕೊಟ್ಟು ಗೌರವಿಸಲಾಯಿತು.  ಈ ಸಂದರ್ಭದಲ್ಲಿ  ಶ್ರೀಕೃಷ್ಣನ ಹಿರಿಮೆಯ ಮಹತ್ವದ ಬಗ್ಗೆ ಶಿಕ್ಷಕಿ ಶ್ರೀಮತಿ ಹೇಮಾ ವೈಲಾಯ ತಿಳಿಸಿದರು. ಕಾರ್ಯಕ್ರಮವನ್ನು ಶಿಕ್ಷಕಿ ಶ್ರೀಮತಿ ಸುನಿತಾ ನಿರೂಪಿಸಿದರು. ಶ್ರೀಮತಿ ಸ್ನೇಹ ಗದಗ್ ಸ್ವಾಗತಿಸಿ ಶ್ರೀಮತಿ ರೇಖಾ ಸತ್ಯ ವಂದಿಸಿದರು. ಕಾರ್ಯಕ್ರಮದಲ್ಲಿ  ಪೋಷಕ ವರ್ಗ  ಮತ್ತು ಶಿಕ್ಷಕ -ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.