














ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಯೇನೆಕಲ್ಲು ಇದರ ಆಶ್ರಯದಲ್ಲಿ 18ನೇ ವರ್ಷದ ಶ್ರೀ ಗಣೇಶೋತ್ಸವ ಆ. 27 ಮತ್ತು 28ರಂದು ಯೇನೆಕಲ್ಲಿನ ಶ್ರೀ ಆದಿಶಕ್ತಿ ಭಜನಾ ಮಂದಿರದಲ್ಲಿ ನಡೆಯಲಿದೆ.
ಆ. 27ರಂದು ಬೆಳಿಗ್ಗೆ ಗಣಪತಿ ಹೋಮ, ಪ್ರತಿಷ್ಠಾಪನೆ, ಭಜನಾ ಕಾರ್ಯಕ್ರಮ ನಡೆಯಲಿದೆ. ಅಪರಾಹ್ನ 2.00 ಗಂಟೆಯಿಂದ ಶಲಾ ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದೆ. ಆ. 28 ರಂದು ಬೆಳಿಗ್ಗೆ 9.00ಗಂಟೆಯಿಂದ ಪುರುಷರಿಗೆ, ಮಹಿಳೆಯರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಲಿದೆ. ಮಧ್ಯಾಹ್ನ ಬಹುಮಾನ ವಿತರಣೆ, ಹಾಗೂ ಸತ್ಯನಾರಾಯಣ ಹೆಗ್ಡೆ ನಡುಮಜಲು ಇವರಿಂದ ಧಾರ್ಮಿಕ ಉಪನ್ಯಾಸ ನಡೆದು, ಅಪರಾಹ್ನ 2.00ಗಂಟೆಯಿಂದ ಕುಣಿತ ಭಜನೆ ಮತ್ತು ಭಜನೆಯೊಂದಿಗೆ ವೈಭವದ ಶೋಭಾಯಾತ್ರೆ ನಡೆಯಲಿದೆ.










