ಅಕ್ಷಯ ಸಂಜೀವಿನಿ ಒಕ್ಕೂಟ ಮಂಡೆಕೋಲು ಇದರ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ ಒಕ್ಕೂಟದ ಅಧ್ಯಕ್ಷರಾದ FCC ಭಾರತಿ ಉಗ್ರಾಣಿ ಮನೆಯವರ ಅಧ್ಯಕ್ಷತೆಯಲ್ಲಿ ಆ. 22ರಂದು ನಡೆಯಿತು. ಪಂಚಾಯತ್ ಅಧ್ಯಕ್ಷರಾದ ಕುಶಲ ದೀಪ ಬೆಳಗಿಸುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ದಿವ್ಯಲತಾ ಚೌಟಾಜೆ ಪ್ರಾರ್ಥಿಸಿದರು. ಜಲಜ ದೇವರಗುಂಡ ಸ್ವಾಗತಿಸಿ, ಚಂದ್ರಾವತಿ ವಂದಿಸಿದರು. ಒಕ್ಕೂಟದ ಕಾರ್ಯದರ್ಶಿ ವಾರ್ಷಿಕ ವರದಿ ಮಂಡಿಸಿದರು.
















ವಲಯ ಮೇಲ್ವಿಚಾರಕರಾದ ಮಹೇಶ್ ಸಂಜೀವಿನಿಯ ಬಗ್ಗೆ ಪ್ರಾಸ್ತಾವಿಕ ಮಾತನಾಡಿದರು. ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಶ್ವೇತಾ ಲಿಂಗತ್ವ ಮತ್ತು ಸಂಜೀವಿನಿ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ಆರೋಗ್ಯ ಅಧಿಕಾರಿ ಪ್ರಮೀಳ ಆಹಾರ, ನೀರು, ನೈರ್ಮಲ್ಯದ ಬಗ್ಗೆ ಮಾಹಿತಿ ನೀಡಿದರು. ಸುಜಾತ ಬ್ಯಾಂಕ್ ಸಾಲ, ಇನ್ಸೂರೆನ್ಸ್ ಗಳ ಬಗ್ಗೆ ಮಾಹಿತಿ ನೀಡಿದರು. ಸಾವಿತ್ರಿ ಕಣೇಮರಡ್ಕ ಕಾರ್ಯಕ್ರಮ ನಿರೂಪಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.










