ಜಾಲ್ಸೂರು : ಪರಿಸರ ಜಾಗೃತಿ ಕಾರ್ಯಕ್ರಮ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಸುಳ್ಯ, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಜಾಲ್ಸೂರು ಇದರ ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮವು ಕದಿಕಡ್ಕ ಸ.ಹಿ.ಪ್ರಾ ಶಾಲೆಯಲ್ಲಿ ಆ. 25ರಂದು ನಡೆಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸಾವಿತ್ರಿ ಅಡ್ಕಾರುಬೈಲು ಸಸಿ ನೆಟ್ಟು ನೀರು ಹಾಕುವ ಮೂಲಕ ಉದ್ಘಾಟಿಸಿದರು.

ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷೆ ಸುಜಾತ ಭಟ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾಲೂಕು ಕೃಷಿ ಅಧಿಕಾರಿ ರಮೇಶ್, ಶ್ರೀ ಗುರು ರಾಘವೇಂದ್ರ ಭಜನಾ ಮಂದಿರದ ಉಪಾಧ್ಯಕ್ಷ ಮಾಧವ ಕಾಳಮನೆ, ಅಂಜನಾದ್ರಿ ಒಕ್ಕೂಟದ ಅಧ್ಯಕ್ಷ ಕೃಷ್ಣಪ್ಪ ನಾಯ್ಕ ಜಾಲ್ಸೂರು, ಅಡ್ಕಾರು ಒಕ್ಕೂಟದ ಉಪಾಧ್ಯಕ್ಷ ನವೀನ್ ಅಂಬಾಡಿಮೂಲೆ, ಎಸ್ ಡಿ ಎಂ ಸಿ ಉಪಾಧ್ಯಕ್ಷ ತಿಮ್ಮಯ್ಯ ಆಚಾರ್ ಜಾಲ್ಸೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕೃಷಿ ಅಧಿಕಾರಿ ರಮೇಶ್ ಅವರು ಪರಿಸರ ಜಾಗೃತಿಯ ಬಗ್ಗೆ ಮಾಹಿತಿ ನೀಡಿದರು. ಶಾಲಾ ಮಕ್ಕಳಿಗೆ ಗಿಡ ಗುರುತಿಸುವ ಹಾಗೂ ಹಲವು ಸ್ಪರ್ಧಾ ಕಾರ್ಯಕ್ರಮಗಳನ್ನು ಏರ್ಪಡಿಸಿದ್ದರು. ವಿಜೇತರಾದ ಮಕ್ಕಳಿಗೆ ಯೋಜನೆ ವತಿಯಿಂದ ಬಹುಮಾನವನ್ನು ವಿತರಿಸಲಾಯಿತು.
ಕಾರ್ಯಕ್ರಮದ ಸ್ವಾಗತ ಹಾಗೂ ನಿರೂಪಣೆಯನ್ನು ಶಾಲಾ ಮುಖ್ಯ ಶಿಕ್ಷಕಿ ಅನುಷಾ ಕೆ.ವಿ ನೆರವೇರಿಸಿದರು. ಒಕ್ಕೂಟದ ಸೇವಾ ಪ್ರತಿನಿಧಿ ಚಂದ್ರಕಲಾ ವಂದಿಸಿದರು.