ಕಾಯರ್ತೋಡಿ ಮಹಾ ವಿಷ್ಣು ದೇವಸ್ಥಾನದಲ್ಲಿ ಗಣಹೋಮ

0

ಕಾಯರ್ತೋಡಿ ಶ್ರೀ ಮಹಾ ವಿಷ್ಣು ದೇವಸ್ಥಾನದಲ್ಲಿ ಆ.27ರಂದು ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಆರು ತೆಂಗಿನ ಕಾಯಿ ಗಣಹೋಮ ಹಾಗೂ ವಿಶೇಷ ಮಹಾ ಪೂಜೆ ದೇವಾಲಯದ ಅರ್ಚಕರಾದ ನೀಲಕಂಟ ಭಟ್ ಪೌರುತ್ಯದಲ್ಲಿ ನಡೆಯಿತು.


ಈ ಸಂದರ್ಭದಲ್ಲಿ ವ್ಯವಸ್ಥಾಪನ ಅಧ್ಯಕ್ಷ ವೆಂಕಪ್ಪ ಗೌಡ ಮತ್ತು ಸದಸ್ಯರು ಸೇವಾ ಸಮಿತಿಯ ಉಪಾಧ್ಯಕ್ಷರು ಮತ್ತು ಸದಸ್ಯರು, ಮಿತ್ರಬಳಗ ಕಾಯರ್ತೋಡಿಯ ಪದಾಧಿಕಾರಿಗಳು, ವ್ಯವಸ್ಥಾಪನ ಸಮಿತಿಯ ಮಾಜಿ ಸದಸ್ಯರು ಹಾಗೂ ಭಕ್ತರು ಭಾಗವಹಿಸಿದ್ದರು.