ತೊಡಿಕಾನ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಪ್ರಯುಕ್ತ ಆ. 27 ರಂದು 108 ಕಾಯಿ ಗಣಪತಿ ಹವನ ಹಾಗೂ ಇತರ ವೈಧಿಕ ಕಾರ್ಯಕ್ರಮಗಳು ನಡೆಯಿತು.















ದೇವಸ್ಥಾನದಲ್ಲಿ ಬೆಳಿಗ್ಗೆ ಕದಿರು ಪೂಜೆ, ವಿತರಣೆ ನಡೆಯಿತು. ಬಳಿಕ 108 ಕಾಯಿ ಗಣಪತಿ ಹವನ, ಮದ್ಯಾಹ್ನ ಚೌತಿ ಪ್ರಯುಕ್ತ ವಿಶೇಷ ಪೂಜೆ ನಡೆಯಿತು. ನೂರಾರು ಭಕ್ತರು ಪೂಜೆಯಲ್ಲಿ ಪಾಲ್ಗೊಂಡು ಬಳಿಕ ಅನ್ನಪ್ರಸಾದ ಸ್ವೀಕರಿಸಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಸದಸ್ಯರು, ಮಾಜಿ ಅಧ್ಯಕ್ಷರು ಸದಸ್ಯರು, ಜೀರ್ಣೋದ್ದಾರ ಸಮಿತಿ ಪದಾಧಿಕಾರಿಗಳು, ಭಜನಾ ಮಂಡಳಿ ಪದಾಧಿಕಾರಿಗಳು ನೂರಾರು ಭಕ್ತರು ಭಾಗವಹಿಸಿದ್ದರು.










