ನಾರ್ಣಕಜೆಯಲ್ಲಿ 46ನೇ ವರ್ಷದ ಗಣೇಶೋತ್ಸವ ಆಚರಣೆ

0

ನೆಲ್ಲೂರು ಕೆಮ್ರಾಜೆ ಯುವಕ ಮಂಡಲದಿಂದ ಆಯೋಜನೆ

ಧಾರ್ಮಿಕ ಕಾರ್ಯಕ್ರಮ, ಭಜನಾ ಕಾರ್ಯಕ್ರಮ, ಆಟೋಟ ಸ್ಪರ್ಧೆ – ಸಾಂಸ್ಕೃತಿಕ ಕಾರ್ಯಕ್ರಮ

ನೂರಾರು ಭಕ್ತರ ಪಾಲ್ಗೊಳ್ಳುವಿಕೆ

ಸಂಜೆ ಶೋಭಯಾತ್ರೆ – ಜಲಸ್ಥಂಬನ

46ನೇ ವರ್ಷದ ಶ್ರೀ ಗಣೇಶೋತ್ಸವ ಆಚರಣೆ ನಾರ್ಣಕಜೆ ವಠಾರದಲ್ಲಿ ನಡೆಯಿತು.

ಬೆಳಿಗ್ಗೆ ಸ್ಥಳ ಶುದ್ದಿ, ಗಣಪತಿ ಹೋಮ, ದುರ್ಗಾ ಶ್ರೀ ಭಜನಾ ಮಂಡಳಿ ನಾರ್ಣಕಜೆ, ನಾಗಶ್ರೀ ಭಜನಾ ಮಂಡಳಿ ದಾಸನಕಜೆ, ಶ್ರೀ ಮಂಜುನಾಥ ಮಹಿಳಾ ಭಜನಾ ಮಂಡಳಿ ಗಟ್ಟಿಗಾರು, ಶ್ರೀ ಬ್ರಾಹ್ಮರಿ ಮಹಿಳಾ ಭಜನಾ ಮಂಡಳಿ ದೊಡ್ಡತೋಟ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು. ಬಳಿಕ ವಿದ್ಯಾರ್ಥಿಗಳಿಂದ, ಸಾರ್ವಜನಿಕರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

ಮಧ್ಯಾಹ್ನದ ಬಳಿಕ ಸಭಾ ಕಾರ್ಯಕ್ರಮ, ಸನ್ಮಾನ ಕಾರ್ಯಕ್ರಮ ನಡೆಯಿತು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೆಲ್ಲೂರು ಕೆಮ್ರಾಜೆ ಯುವಕ ಮಂಡಲದ ಅಧ್ಯಕ್ಷ ಕೌಶಿಕ್ ಸುಳ್ಳಿ ವಹಿಸಿದ್ದರು. ವೇದಿಕೆಯಲ್ಲಿ ನೆಲ್ಲೂರು ಕೆಮ್ರಾಜೆ ಪ್ರಾ. ಕೃ. ಪ. ಸ. ಸಂಘದ ಅಧ್ಯಕ್ಷರಾದ ವಿಷ್ಣು ಭಟ್ ಮೂಲೆತೋಟ, ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಧನಂಜಯ ಕೋಟೆಮಲೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಯಲ್ಲಿ ಅತೀ ಹೆಚ್ಚು ಅಂಕ ಪಡೆದ 7 ಜನ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಯೋಗರಾಜ್ ಬಾಜಿನಡ್ಕ ಸ್ವಾಗತಿಸಿ, ಸಂತೋಷ್ ನಾರ್ಣಕಜೆ ವಂದಿಸಿದರು. ತೀರ್ಥಶ್ ನಾರ್ಣಕಜೆ ಕಾರ್ಯಕ್ರಮ ನಿರೂಪಿಸಿದರು.

ಬಳಿಕ ಶ್ರೀನಂದನ ಕಲಾ ಕುಟುಂಬ ಮೆಟ್ಟಿನಡ್ಕ, ನಾಲ್ಕುರು ಸಾರಾಥ್ಯದಲ್ಲಿ ಸಾಂಸ್ಕೃತಿಕ ಕಲಾ ವೈಭವ ನಡೆಯಿತು. ಸಂಜೆ ಶೋಭಾಯಾತ್ರೆ ನಡೆದು, ಜಲಸ್ಥಂಭನೆ ನಡೆಯಿತು.

ನೂರಾರು ಭಕ್ತರು ಶ್ರೀ ದೇವರ ಪ್ರಸಾದ ಸ್ವೀಕರಿಸಿದರು.