ಓಡಬಾಯಿ ಹೆದ್ದಾರಿ ಬಳಿ ನಿಲ್ಲಿಸಿದ್ದ ಕಾರಿಗೆ ಪಿಕಪ್ ವಾಹನ ಡಿಕ್ಕಿ ಸಂಭವಿಸಿ ಕಾರು ಜಖಂ ಗೊಂಡ ಘಟನೆ ಆ ೨೮ ರಂದು ನಡೆದಿದೆ.















ರಿಟ್ಜ್ ಕಾರು ಚಾಲಕ ಕಾರನ್ನು ರಸ್ತೆ ಬದಿ ನಿಲ್ಲಿಸಿ ಟೀ ಕುಡಿಯಲು ತೆರಳಿದ್ದರು ಎನ್ನಲಾಗಿದೆ.
ಈ ಸಮಯದಲ್ಲಿ ಪೈಚಾರ್ ಕಡೆಯಿಂದ ಸುಳ್ಯ ಕಡೆ ಬರುತ್ತಿದ್ದ ಪಿಕಪ್ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಲ್ಲಿಸಿದ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನ ಮುಂಭಾಗ ಜಖಂಗೊಂಡಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.










