ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಆಂತರಿಕ ಗುಣಮಟ್ಟ ಭರವಸಾ ಕೋಶ ಆಶ್ರಯದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಆ.23 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಹರೀಶ್ ಇಂಜಾಡಿ ವಹಿಸಿದ್ದರು. ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾl ಅರುಣ್ ಪ್ರಕಾಶ್ ಕಾರ್ಯಕ್ರಮ ಉದ್ಘಾಟಿಸಿದರು. ಪುತ್ತೂರಿನ















ಮುಖ್ಯ ಅತಿಥಿಯಾಗಿ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ದತ್ತು ಗ್ರಾಮವಾದ ಬಿಳಿನೆಲೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಶಾರದಾ ದಿನೇಶ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ದೇವಳದ ವ್ಯವಸ್ಥಾಪನ ಸಮಿತಿಯ ಸದಸ್ಯರುಗಳಾದ ಅಜಿತ್ ಪಾಲೇರಿ,ಶ್ರೀಮತಿ ಲೀಲಾ ಮನಮೋಹನ್, ಶ್ರೀಮತಿ ಪ್ರವೀಣ ರೈ, ಶ್ರೀಮತಿ ಸೌಮ್ಯ ಭರತ್ ಹಾಗೂ ಮಾಸ್ಟರ್ ಪ್ಲಾನ್ ಸಮಿತಿಯ ಸದಸ್ಯರಾದ ಸತೀಶ್ ಕೂ ಜುಗೋಡು ಮತ್ತು ಪವನ್ ಎಂ.ಡಿ ,ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ದಿನೇಶ ಪಿ.ಟಿ, ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಯೋಜಕರಾದ ಲತಾ ಬಿ. ಟಿ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕದ ನಾಯಕರುಗಳಾದ ದೇಗುಲ್, ಸುಷ್ಮಾ, ಹಿತೇಶ್, ದೇವಿಕಾ ಉಪಸ್ಥಿತರಿದ್ದರು. ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಯೋಜನಾಧಿಕಾರಿ ಆರತಿ ಕೆ ಸ್ವಾಗತಿಸಿ, ಇನ್ನೋರ್ವ ಯೋಜನಾಧಿಕಾರಿ ಸುಮಿತ್ರ ಕುಮಾರಿ ಧನ್ಯವಾದ ಸಮರ್ಪಿಸಿ ವಿದ್ಯಾರ್ಥಿನಿ ಸಂಖ್ಯಾ ಕಾರ್ಯಕ್ರಮ ನಿರೂಪಿಸಿದರು.










