ಶ್ರೀ ಗಣೇಶೋತ್ಸವ ಸೇವಾ ಟ್ರಸ್ಟ್ ಬಳ್ಳಕ್ಕ ಇದರ ಆಶ್ರಯದಲ್ಲಿ 38ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆ. 27ರಂದು ನಡೆಯಿತು.

ಬೆಳಿಗ್ಗೆ ಗಣಪತಿ ಪ್ರತಿಷ್ಠೆ, ಶ್ರೀ ಮಹಮ್ಮಾಯಿ ಭಜನಾ ತಂಡ ಬಳ್ಳಕ್ಕ ಇವರಿಂದ ಭಜನಾ ಕಾರ್ಯಕ್ರಮ, ರಂಗಪೂಜೆ, ಅಕ್ಷರಾಭ್ಯಾಸ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಿತು.















ಹರಿಪುರ ಬಳ್ಳಕ್ಕ ಶಾಲೆಯಲ್ಲಿ ಸಹ ಶಿಕ್ಷಕರಾಗಿ ನಿಯೋಜನೆಗೊಂಡಿರುವ ಪ್ರದೀಪ್ ಕುಮಾರ್ ಎಸ್.ಕೆ ಯವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಗಣೇಶೋತ್ಸವ ಸೇವಾ ಟ್ರಸ್ಟ್ ಪದಾಧಿಕಾರಿಗಳು, ಶಾಲಾ ಎಸ್.ಡಿ.ಎಂ.ಸಿ. ಪದಾಧಿಕಾರಿಗಳು, ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸಂಜೆ ಶೋಭಾಯಾತ್ರೆ ನಡೆದು ಚಿಮಿಕಯ ಹೊಳೆಯಲ್ಲಿ ಗಣಪತಿ ವಿಸರ್ಜನೆ ನಡೆಯಿತು.











