ಯೋಗ ಪ್ರದರ್ಶನ, ನೃತ್ಯ ವೈಭವ
ಸುಳ್ಯ ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ಆ. 24 ರಂದು ಹಮ್ಮಿಕೊಂಡ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ಸ್ಪರ್ಧೆಗಳಿಗೆ ರಾತ್ರಿ ನಡೆದ ಬಹುಮಾನ ವಿತರಣಾ ಸಮಾರಂಭವು ಆ. 27 ರಂದು ನಡೆಯಿತು.
ಮುಖ್ಯ ಅತಿಥಿಯಾಗಿ ಅಳಿಕೆ ಸತ್ಯಸಾಯಿ ವಿದ್ಯಾ ಸಂಸ್ಥೆ ಯ ನಿವೃತ್ತ ಉಪನ್ಯಾಸಕ
ಬಿ. ಪದ್ಮನಾಭ ಭಟ್ ರವರು ವಿಜೇತರಿಗೆ ಬಹುಮಾನ ವಿತರಿಸಿದರು.
















ದೇವತಾರಧಾನ ಸಮಿತಿ ಅಧ್ಯಕ್ಷ ದಿನೇಶ್ ಕುಮಾರ್ ಕೆ. ಸಿ ಅಧ್ಯಕ್ಷತೆ ವಹಿಸಿದ್ದರು.
ಸಿದ್ದಿವಿನಾಯಕ ಸೇವಾ ಸಮಿತಿ ಅಧ್ಯಕ್ಷ ಪಿ. ಕೆ ಉಮೇಶ, ಸಿ. ಎ ಬ್ಯಾಂಕ್ ನಿರ್ದೇಶಕ ಶಿವರಾಮ ಕೇರ್ಪಳ,ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ಲತಾ ಮಧುಸೂಧನ್, ಗೌರವಾ ಧ್ಯಕ್ಷ ಗೋಪಾಲಕೃಷ್ಣಕೆ. ಎಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಂಜೆ ಯೋಗೇನ ಚಿತ್ತಸ್ಯ ಯೋಗ ಕೇಂದ್ರದ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ಹಾಗೂ ಗಜಾನನ ನಾಟ್ಯಾಂಜಲಿ ಕಲಾ ಕ್ಷೇತ್ರ ಮುಳ್ಳೇರಿಯಾ ತಂಡದಿಂದ ನೃತ್ಯ ವೈಭವ ಪ್ರದರ್ಶನವಾಯಿತು.










