
ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ರೇಣುಕಾ ಪ್ರಸಾದ್ ಕೆ ವಿ ರವರು ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ಶ್ರೀ ದೇವರ ದರ್ಶನ ಪಡೆದರು. ಅವರನ್ನು ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ ಶಾಲು ಹೊದಿಸಿ ಗೌರವಿಸಿದರು.
















ದೇವಳದ ಅರ್ಚಕ ರಾಮಚಂದ್ರ ಭಟ್ ಶ್ರೀ ದೇವರ ಪ್ರಸಾದ ನೀಡಿ ಪ್ರಾರ್ಥಿಸಿದರು. ಸಾರ್ವಜನಿಕ ಆರಾಧನಾ ಸಮಿತಿ ಗೌರವಾಧ್ಯಕ್ಷ ಮಾಧವ ಗೌಡ ಜಾಕೆ,ಅಧ್ಯಕ್ಷ ಸವಿತಾರ ಮುಡೂರು, ಕಾರ್ಯದರ್ಶಿ ಜಯರಾಮ ಕಲ್ಲಾಜೆ, ಗಣೆಶೋತ್ಸವ ಸಮಿತಿ ಅಧ್ಯಕ್ಷ ಗುರುಪ್ರಸಾದ್ ತೋಟ, ಪೂರ್ವಾಧ್ಯಕ್ಷ ಸಂತೋಷ್ ಜಾಕೆ,ವ್ಯವಸ್ಥಾಪನಾ ಸಮಿತಿ ಸದಸ್ಯ ಧರ್ಮಣ್ಣ ನಾಯ್ಕ ಗರಡಿ, ತೀರ್ಥಾನಂದ ಕೊಡೆಂಕಿರಿ, ತೀರ್ಥಪ್ರಸಾದ್ ಪಲ್ಲತ್ತಡ್ಕ ಉಪಸ್ಥಿತರಿದ್ದರು.











