ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಯೇನೆಕಲ್ಲು ಇದರ ಆಶ್ರಯದಲ್ಲಿ 18ನೇ ವರ್ಷದ ಶ್ರೀ ಗಣೇಶೋತ್ಸವ ಆ. 27 ಮತ್ತು 28ರಂದು ಯೇನೆಕಲ್ಲಿನ ಶ್ರೀ ಆದಿಶಕ್ತಿ ಭಜನಾ ಮಂದಿರದಲ್ಲಿ ನಡೆಯಿತು.















ಆ. 27ರಂದು ಬೆಳಿಗ್ಗೆ ಗಣಪತಿ ಹೋಮ, ಪ್ರತಿಷ್ಠಾಪನೆ, ಭಜನಾ ಕಾರ್ಯಕ್ರಮ ನಡೆಯಿತು. ಅಪರಾಹ್ನ ಶಾಲಾ ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು. ಆ. 28 ರಂದು ಬೆಳಿಗ್ಗೆ ಪುರುಷರಿಗೆ, ಮಹಿಳೆಯರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಿತು.

ಮಧ್ಯಾಹ್ನ ಬಹುಮಾನ ವಿತರಣೆ, ಹಾಗೂ ಸಮಿತಿಯ ಅಧ್ಯಕ್ಷ ಪ್ರಹ್ಲಾದ್ ರವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಸತ್ಯನಾರಾಯಣ ಹೆಗ್ಡೆ ನಡುಮಜಲು ಧಾರ್ಮಿಕ ಉಪನ್ಯಾಸ ನೀಡಿದರು. ಗಣೇಶೋತ್ಸವ ಸಮಿತಿ ಸ್ಥಾಪಕಾಧ್ಯಕ್ಷ ರೇಗಪ್ಪ ಗೌಡ ಪುಂಡಿಗದ್ದೆ ವೇದಿಕೆಯಲ್ಲಿದ್ದರು. ಪ್ರತೀಕ್ಷಾ ಹವಿನ್ ಬಾಲಾಡಿ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಸಮಿತಿಯ ಕಾರ್ಯದರ್ಶಿ ಹವಿನ್ ಬಾಲಾಡಿ ಸ್ವಾಗತಿಸಿ, ಯೇನೆಕಲ್ಲು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಭವಾನಿಶಂಕರ ಪೂಂಬಾಡಿ ವಂದಿಸಿದರು. ಮೋಹಿತ್ ಜೇನುಕೋಡಿ ಕಾರ್ಯಕ್ರಮ ನಿರೂಪಿಸಿದರು. ಅಪರಾಹ್ನ ಕುಣಿತ ಭಜನೆ ಮತ್ತು ಭಜನೆಯೊಂದಿಗೆ ವೈಭವದ ಶೋಭಾಯಾತ್ರೆ ನಡೆಯಿತು.











